ಚಿಕ್ಕಮಗಳೂರಿನಲ್ಲಿ ಗುಡ್ಡ ಕುಸಿತ: ಸೊಲ್ಲಾಪುರ-ಮಂಗಳೂರು ಹೆದ್ದಾರಿ ಬಂದ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಮಗಳೂರು ಜಿಲ್ಲೆಯಲ್ಲಿ ಗಾಳಿ ಸಹಿತ ಮಳೆಯಾಗುತ್ತಿದೆ. ಗಾಳಿ-ಮಳೆಯಿಂದ ಸೃಷ್ಟಿಯಾದ ಅವಾಂತರಗಳಿಂದ ಜನರು ಹೈರಾಣಾಗಿದ್ದಾರೆ. ಸೊಲ್ಲಾಪುರದಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತಗೊಂಡ ಹಿನ್ನೆಲೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

ತನಿಕೋಡು ಚೆಕ್​ಪೋಸ್ಟ್​ನಿಂದ ಎಸ್​.ಕೆ. ಗಡಿಯ​ವರೆಗೆ ಇಂದು (ಜೂ.17) ರಾತ್ರಿಯಿಂದ ಜೂನ್ 20ರ ಬೆಳಗ್ಗೆ 8ರವರೆಗೆ ಮುಂಜಾಗ್ರತಾ ಕ್ರಮವಾಗಿ ಎಲ್ಲ ಮಾದರಿಯ ವಾಹನ ಸಂಚಾರಕ್ಕೆ ಜಿಕ್ಕಮಗಳೂರು ಜಿಲ್ಲಾಡಳಿತ ನಿರ್ಬಂಧಿಸಿದೆ.

ಬದಲಿ ಮಾರ್ಗವಾದ ಬಾಳೆಹೊನ್ನೂರು, ಮಾಗುಂಡಿ, ಕಳಸ, ಕುದುರೆಮುಖ ಮುಖಾಂತರ ಎಸ್.ಕೆ.ಬಾರ್ಡರ್​ಗೆ ತಲುಪುವಂತೆ ವಾಹನ ಸವಾರರಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!