October 3, 2026
Saturday, October 3, 2026
spot_img

ಹುಲಿಕಲ್ ಘಾಟಿಯಲ್ಲಿ ಗುಡ್ಡ ಕುಸಿತ: ಮೂವರು ಕಾರ್ಮಿಕರು ಸಾ*ವು, ಇಬ್ಬರ ಸ್ಥಿತಿ ಗಂಭೀರ

ಹೊಸದಿಗಂತ ಶಿವಮೊಗ್ಗ:

ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಗುರುವಾರ ಸಂಜೆ ಭೀಕರ ದುರಂತವೊಂದು ಸಂಭವಿಸಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಶ್ರೀ ಚಂಡಿಕಾಂಬಾ ದೇವಸ್ಥಾನದ ಸಮೀಪದ ಹೇರ್‌ಪಿನ್ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಭಾರೀ ಪ್ರಮಾಣದ ಮಣ್ಣು ಜರಿದು ಬಿದ್ದಿದೆ. ಮೃತರನ್ನು ಚಕ್ರಾ ನಗರದ ರೈಟರ್ ರಾಘವೇಂದ್ರ (37), ಹಾವೇರಿ ತಾಲೂಕು ನೀಲವಗಲ್ಲಿನ ರಾಜು (30) ಮತ್ತು ಶಬ್ಬೀರ್ (40) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಸುಮಂತ ಮತ್ತು ಪರಮೇಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯ ಪೂರ್ಣಗೊಳಿಸಿದ್ದಾರೆ. ಶಾಸಕ ಆರಗ ಜ್ಞಾನೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಾಟಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, ಮೊಬೈಲ್ ನೆಟ್‌ವರ್ಕ್ ಇಲ್ಲದ ಕಾರಣ ಸಂಪರ್ಕಕ್ಕೆ ತೀವ್ರ ಅಡಚಣೆ ಉಂಟಾಗಿದೆ.

Must Read