ವರುಣಾರ್ಭಟಕ್ಕೆ ಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರಾವಳಿ ಭಾಗದಲ್ಲಿ ಭಾರಿ ಮಳೆ ಹಾಗೂ ಬಿರುಗಾಳಿ ಬೀಸುತ್ತಿದ್ದು, ಹಲವು ಹೆದ್ದಾರಿಗಳಲ್ಲಿ ಭೂಕುಸಿತ, ಮಣ್ಣು ಕುಸಿದು ವಾಹನ ಸಂಚಾರ ಸ್ಥಗಿತಗೊಂಡಿದೆ.

ಭಾರೀ ಮಳೆಯಿಂದಾಗಿ ಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ವರ್ನಕೇರಿ ಗ್ರಾಮದ ಬಳಿ ಭೂಕುಸಿತ ಸಂಭವಿಸಿದ್ದು, ಹೆದ್ದಾರಿಯಲ್ಲಿ ಭಾರೀ ಪ್ರಮಾಣದ ಮಣ್ಣು, ಬೃಹತ್ ಬಂಡೆಗಳು, ಮರಗಳು ಬಿದ್ದಿವೆ. ಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಸ್ಥಗಿತಗೊಂಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಒತ್ತುವರಿ ತೆರವು ಹಾಗೂ ಸುಗಮ ಸಂಚಾರಕ್ಕೆ ಸಿದ್ಧತೆ ವಿಳಂಬವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!