ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತವುಂಟಾಗಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಗುಡ್ಡ ಕುಸಿದಿದ್ದು, ಶಿರಾಡಿಘಾಟ್ ನ ರಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತಗೊಂಡಿದೆ.
ಕಿಲೋಮೀಟರ್ ಗಟ್ಟಲೇ ವಾಹನಗಳು ನಿಂತಿದ್ದು, ಜನರು ಪರದಾಟ ನಡೆಸಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ಮಣ್ಣು ತೆರವು ಮಾಡುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.