ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೆನಾಡು ಭಾಗದಲ್ಲಿ ವರುಣಾರ್ಭಟ ಮುಂದುವರೆದಿದೆ. ಭಾರೀ ಮಳೆ ಸುರಿದ ಪರಿಣಾಮ ಸಕಲೇಶಪುರ ತಾಲೂಕಿನ ಬಿಸಿಲೆ ಸಮೀಪದಲ್ಲಿನ ರಸ್ತೆಗೆ ಗುಡ್ಡದ ಮಣ್ಣು ಕುಸಿದಿದ್ದುಇದರಿಂದ ಸುಬ್ರಹ್ಮಣ್ಯ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.
ನಿರಂತರ ಮಳೆಯಿಂದ ತಾಲೂಕಿನ ಬಿಸಿಲೆ ಸಮೀಪದಲ್ಲಿನ ರಸ್ತೆಗೆ ಗುಡ್ಡ ಕುಸಿದು ಇಲ್ಲಿನ ಸಂಪರ್ಕ ಸ್ಥಗಿತವಾಗಿದೆ. ಇದೇ ಮಾರ್ಗದಲ್ಲಿ ಬೆಳಗ್ಗೆಯೂ ಮರ ಬಿದ್ದು ಕೆಲ ಗಂಟೆಗಳ ಸಂಚಾರ ಸ್ಥಗಿತವಾಗಿತ್ತು. ಇದೀಗ ಗುಡ್ಡ ಕುಸಿದು ಮತ್ತೆ ಸಂಪರ್ಕ ಸ್ಥಗಿತವಾಗಿದೆ. ಮಳೆ ಆರ್ಭಟ ಹೆಚ್ಚಾಗಿರುವ ಹಿನ್ನೆಲೆ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.