ಹಿಮಾಚಲ ಡಿಸಿಎಂ ಮುಖೇಶ್ ಅಗ್ನಿಹೋತ್ರಿಗೆ ಪತ್ನಿ ‘ಪ್ರೊಫೆಸರ್’ ಸಿಮಿ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಮಾಚಲ ಪ್ರದೇಶದ ಉಪಮುಖ್ಯಮಂತ್ರಿ ಮುಖೇಶ್ ಅಗ್ನಿಹೋತ್ರಿ ಪತ್ನಿ ಪ್ರೊಫೆಸರ್ ಸಿಮಿ ಅಗ್ನಿಹೋತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ನಿನ್ನೆ ಇದ್ದಕ್ಕಿದ್ದಂತೆಯೇ ಸಿಮಿ ಅವರಿಗೆ ಉಸಿರಾಟದ ತೊಂದರೆ ಕಾಣಿಸಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಪ್ರಯತ್ನದ ನಂತರವೂ ಸಿಮಿ ಅವರನ್ನು ಉಳಿಸಿಕೊಳ್ಳಲು ಆಗಲಿಲ್ಲ. ಹಠಾತ್ ಹೃದಯಾಘಾತವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಈ ವೇಳೆ ಡಿಸಿಎಂ ಅಗ್ನಿಹೋತ್ರಿ ಕ್ಯಾಬಿನೆಟ್ ಮೀಟಿಂಗ್‌ನಲ್ಲಿದ್ದರು. ಆಸ್ಪತ್ರೆ ತಲುಪುವ ವೇಳೆಗೆ ಸಿಮಿ ಕೊನೆಯುಸಿರೆಳೆದಿದ್ದರು.

ಈ ಬಗ್ಗೆ ಅಗ್ನಿಹೋತ್ರಿ ಅವರು ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಒಂದನ್ನು ಮಾಡಿದ್ದಾರೆ. ನಮ್ಮ ಪ್ರೀತಿಯ ಪ್ರೊಫೆಸರ್, ನಮ್ಮನ್ನೆಲ್ಲಾ ಬಿಟ್ಟು ಕಾಣದ ಲೋಕಕ್ಕೆ ಹೋಗಿದ್ದಾರೆ ಎಂದು ಹೇಳಿದ್ದಾರೆ. ರಾಜಕೀಯ ಗಣ್ಯರು, ಸ್ನೇಹಿತರು, ಬಂಧುಗಳು, ವಿದ್ಯಾರ್ಥಿಗಳು ಸಿಮಿ ಅವರ ಅಂತಿಮ ದರುಶನ ಪಡೆಯುತ್ತಿದ್ದು, ಮಧ್ಯಾಹ್ನ ಎರಡು ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!