Sunday, November 27, 2022

Latest Posts

ಶಿಮ್ಲಾದಲ್ಲಿ ಸೇಬು ತುಂಬಿದ್ದ ಟ್ರಕ್‌ ಪಲ್ಟಿ: ಕಾರಿನಲ್ಲಿದ್ದ ಮೂವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಸೇಬು ತುಂಬಿದ್ದ ಟ್ರಕ್ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಾವನ್ನಪ್ಪಿರುವ ಭೀಕರ ಘಟನೆ ಶನಿವಾರ ಬೆಳಗ್ಗೆ ಶಿಮ್ಲಾದ ಛರಾಬ್ರಾದಲ್ಲಿ  ನಡದಿದೆ. ಟ್ರಕ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ಬಗ್ಗೆ  ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಸಂತಾಪ ಆಘಾತ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ʻಥಿಯೋಗ್-ಶಿಮ್ಲಾ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರ ಸಾವಿನ ಸುದ್ದಿ ತುಂಬಾ ದುಃಖಕರವಾಗಿದೆ, ದೇವರು ಅಗಲಿದವರಿಗೆ ಶಾಂತಿ ಮತ್ತು ದುಃಖಿತ ಕುಟುಂಬಗಳಿಗೆ ಶಕ್ತಿಯನ್ನು ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ, ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!