ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ: ಬಿಜೆಪಿಯ 62 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಮುಂಬರುವ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ 62 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸಿಎಂ ಜೈರಾಮ್ ಠಾಕೂರ್ ಅವರು ಸೆರಾಜ್ ಕ್ಷೇತ್ರದಿಂದ, ಅನಿಲ್ ಶರ್ಮಾ ಅವರು ಮಂಡಿ ಮತ್ತು ಸತ್ಪಾಲ್ ಸಿಂಗ್ ಸತ್ತಿ ಅವರು ಉನಾ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ.
ಬಿಜೆಪಿಯ ಪ್ರತಿಸ್ಪರ್ಧಿ ಕಾಂಗ್ರೆಸ್ ಅರವತ್ತೆಂಟು ಸ್ಥಾನಗಳ ಪೈಕಿ ಮೊದಲ ನಲವತ್ತಾರು ಹೆಸರುಗಳನ್ನು ಮಂಗಳವಾರ ಬಿಡುಗಡೆ ಮಾಡಿದೆ. ಇದರಲ್ಲಿ ಎಲ್ಲಾ ಹತ್ತೊಂಬತ್ತು ಹಾಲಿ ಶಾಸಕರು ಮತ್ತೆ ಮೊದಲ ಪಟ್ಟಿಯಲ್ಲಿ ಟಿಕೆಟ್ ಪಡೆದಿದ್ದಾರೆ.
68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ವು ಕಾಂಗ್ರೆಸ್ ಪಕ್ಷವನ್ನು ಸೋಲಿಸಿ 44 ಸ್ಥಾನಗಳನ್ನು ಗೆದ್ದುಕೊಂಡಿತು. 2017 ರಲ್ಲಿ ಕಾಂಗ್ರೆಸ್ ಕೇವಲ 21 ಸ್ಥಾನಗಳನ್ನು ಮಾತ್ರವೇ ಗಳಿಸುವಲ್ಲಿ ಶಕ್ತವಾಗಿತ್ತು.

ಪ್ರಸ್ತುತ, ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ 45 ಶಾಸಕರನ್ನು ಹೊಂದಿದ್ದರೆ, ಕಾಂಗ್ರೆಸ್ 22 ಮತ್ತು ಸಿಪಿಎಂ 1 ಶಾಸಕರನ್ನು ಹೊಂದಿದೆ. ಮುಂಬರುವ ರಾಜ್ಯ ಚುನಾವಣೆಯಲ್ಲಿ ಆಪ್ ಗುಜರಾತ್ ಮತ್ತು ಹಿಮಾಚಲ ಪ್ರದೇಶಕ್ಕೆ ಕಾಲಿಡಲು ಮುಂದಾಗಿದೆ.
ಕಳೆದ ವಾರ, ಭಾರತೀಯ ಚುನಾವಣಾ ಆಯೋಗವು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿತು. ರಾಜ್ಯದಲ್ಲಿ ನವೆಂಬರ್ 12 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!