ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ಕಳೆದ ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಅವರು ಕರೋನಾ ಪರೀಕ್ಷೆಗೆ ಒಳಗಾಗಿದ್ದರು. ಪರೀಕ್ಷೆಯಲ್ಲಿ ಅವರಿಗೆ ಕರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ.
ಸಿಎಂ ಆದ ಕೆಲವೇ ದಿನಗಳಲ್ಲಿ ಸುಖ್ವಿಂದರ್ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಪಕ್ಷದ ಮುಖಂಡರು, ಕಾರ್ಯಕರ್ತರು, ತಮಗೆ ಆಪ್ತರಾಗಿರುವ ಅಧಿಕಾರಿಗಳು, ತಮ್ಮ ಸಂಪರ್ಕಕ್ಕೆ ಬಂದ ಎಲ್ಲರೂ ಎಚ್ಚರಿಕೆ ವಹಿಸಬೇಕು ಎಂದು ಸಿಎಂ ಸುಖ್ವಿಂದರ್ ಸೂಚಿಸಿದರು.
Himachal Pradesh Chief Minister Sukhvinder Singh Sukhu tests positive for #COVID19
(File photo) pic.twitter.com/aF1K8pxmgI
— ANI (@ANI) December 19, 2022