ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನ ಮತ ಚಲಾವಣೆ ಮಾಡಿ ಎಂದು ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.
ಚುನಾವಣಾ ಪ್ರಕ್ರಿಯೆಯಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಇದೇ ಮೊದಲ ಬಾರಿ ಮತದಾನ ಮಾಡುತ್ತಿರುವ ಯುವ ಮತದಾರರಿಗೂ ಅಭಿನಂದನೆಗಳು ಎಂದು ಹೇಳಿದ್ದಾರೆ.
ಇಂದು ಹಿಮಾಚಲ ಪ್ರದೇಶದ ಎಲ್ಲಾ ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ದೇವಭೂಮಿಯ ಎಲ್ಲಾ ಮತದಾರರು ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳಿ. ಹೊಸ ದಾಖಲೆಯನ್ನು ಸೃಷ್ಟಿಸಿ ಎಂದು ನಾನು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.