ಹೊಸದಿಗಂತ ಡಿಜಿಟಲ್ ಡೆಸ್ಕ್
ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ರಷ್ಯಾದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಸಿಂಗಾಪುರದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.
ಈ ಸಂಬಂಧ ದೂರು ದಾಖಲಾಗಿದ್ದು, ಆರೋಪಿ ಅಲೆಕ್ಸಾಂಡರ್ ಲೀ ಜಿಯಾ ಜುನ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 (ಅತ್ಯಾಚಾರಕ್ಕೆ ಶಿಕ್ಷೆ) ಅಡಿಯಲ್ಲಿ ಭಾನುವಾರ ಮನಾಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ತನ್ನ ತಾಯಿಯೊಂದಿಗೆ ಮನಾಲಿಯಲ್ಲಿ ನೆಲೆಸಿರುವ ರಷ್ಯಾ ಮಹಿಳೆ ನೀಡಿರುವ ದೂರಿನಲ್ಲಿ, ಜುನ್ ತನ್ನನ್ನು ಆತನ ಕೋಣೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಹೇಳಿದ್ದಾಳೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ