August 24, 2026
Monday, August 24, 2026
spot_img

ಅಸ್ಸಾಂ ಮುಖ್ಯಮಂತ್ರಿ ಸ್ಥಾನಕ್ಕೆ ಹಿಮಂತ ಬಿಸ್ವಾ ಶರ್ಮಾ ರಾಜೀನಾಮೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಂಪುಟ ಸಚಿವರೊಂದಿಗೆ ಬುಧವಾರ ಲೋಕಭವನದಲ್ಲಿ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಭೇಟಿಯಾದ ಹಿಮಂತ ಬಿಸ್ವಾ ಶರ್ಮಾ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಇದೇ ವೇಳೆ ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ಹಿಮಂತ ಬಿಸ್ವಾ ಶರ್ಮಾ ಅವರಿಗೆ ರಾಜ್ಯಪಾಲರು ಸೂಚಿಸಿದ್ದಾರೆ .

ಅಸ್ಸಾಂನಲ್ಲಿ ಮತ್ತೆ ಶರ್ಮಾ ಅವರೇ ಸಿಎಂ ಆಗಿ ಪ್ರಮಾಣಚನ ಸ್ವೀಕರಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಮೇ 12ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆಯಿದೆ .

ಈ ಸಂಬಂಧ ಅಸ್ಸಾಂಗೆ ಕೇಂದ್ರ ವೀಕ್ಷಕರಾಗಿ ಸಚಿವ ಜೆಪಿ ನಡ್ಡಾ ಅವರು ತೆರಳಲಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಿ ಮುಂದಿನ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಬಳಿಕ ಅವರು ಹೊಸ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !