ಹಿಂದಿ ದೃಶ್ಯಂ 2 ಟೀಸರ್ ರಿಲೀಸ್: ಸಿನಿಮಾ ಯಾವಾಗ ಬಿಡುಗಡೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್‌ ನಟ ಅಜಯ್ ದೇವಗನ್, ಅಕ್ಷಯ್ ಖನ್ನಾ ಮತ್ತು ಟಬು ಮತ್ತು ಸೌತ್ ಸುಂದರಿ ಶ್ರಿಯಾ ಶರಣ್ ಅಭಿನಯದ ದೃಶ್ಯಂ 2 ಸಿನಿಮಾದ ಟೀಸರ್ ಇಂದು ರಿಲೀಸ್​ ಆಗಿದ್ದು, ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ.

ನವೆಂಬರ್ 18ರಂದು ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರವನ್ನು ಅಭಿಷೇಕ್ ಪಾಠಕ್ ನಿರ್ದೇಶಿಸಿದ್ದಾರೆ.
ಈ ಚಿತ್ರವು ಮೂಲತಃ 2015ರಲ್ಲಿ ತೆರೆಕಂಡ ಮಲಯಾಳಂನ ಕ್ರೈಂ ಥ್ರಿಲ್ಲರ್ ಆಗಿದೆ. ಇದು ದೃಶ್ಯಂ ಒಂದರ ಮುಂದುವರಿದ ಭಾಗ. ಮಲಯಾಳಂನ ಜನಪ್ರಿಯ ನಟ ಮೋಹನ್‌ಲಾಲ್​ ಅಭಿನಯದಲ್ಲಿ ಮೊದಲ ಬಾರಿಗೆ ಈ ಸಿನಿಮಾ ಚಿತ್ರ ನಿರ್ಮಾಣವಾಗಿತ್ತು. ನಂತರ ತೆಲುಗು, ಕನ್ನಡ, ಹಿಂದಿಯಲ್ಲಿ ರಿಮೇಕ್​ ಮಾಡಲಾಗಿದೆ. ಆದರೆ, ಮಲಯಾಳಂನಲ್ಲಿದ್ದ ಹೆಸರನ್ನೇ ಎಲ್ಲ ಭಾಷೆಗಳಲ್ಲೂ ಇಡಲಾಗಿದೆ.

ದೃಶ್ಯಂ 2 ಶೂಟಿಂಗ್ ಜೂನ್​ 21ರಂದು ಮುಕ್ತಾಯಗೊಂಡಿದೆ. ನವೆಂಬರ್ 18 ರಂದು ಚಿತ್ರವನ್ನು ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ಈಗಾಗಲೇ ಘೋಷಿಸಿದ್ದಾರೆ. ಇಂದು ಬಿಡುಗಡೆ ಅದ ಟೀಸರ್ ಬಹಳ ಕುತೂಹಲ ಮೂಡಿಸಿದೆ. ಟೀಸರ್​ನಲ್ಲಿ ಮೊದಲ ಚಿತ್ರದ ಸಾರಾಂಶ ತೋರಿಸಲಾಗಿದ್ದು, ಈ ಬಾರಿ ನಾಯಕ ಅಜಯ್ ದೇವಗನ್ ಏನೋ ಒಪ್ಪಿಕೊಳ್ಳುವುದಾಗಿ ತಿಳಿಸಿರುವುದು ಪ್ರೇಕ್ಷಕರ ಕುತೂಹಲ ದುಪ್ಪಟ್ಟು ಮಾಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!