ACCIDENT | ಬೈಕ್‌ಗೆ ಟ್ರಕ್‌ ಡಿಕ್ಕಿಯಾಗಿ ಹಿಂದಿ ಕಿರುತೆರೆ ನಟ ನಿಧನ, ಶಾಕ್‌ನಲ್ಲಿ ಫ್ಯಾನ್ಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

‘ಧರ್ತಿಪುತ್ರ ನಂದಿನಿ’ ಧಾರಾವಾಹಿಯಲ್ಲಿನ ಪ್ರಮುಖ ಪಾತ್ರಕ್ಕಾಗಿ ಹೆಸರುವಾಸಿಯಾಗಿದ್ದ ಕಿರುತೆರೆ ನಟ ಅಮನ್ ಜೈಸ್ವಾಲ್ (23) ಕಳೆದ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

Aman Jaiswal, 22, TV actor, dies after truck crashes into his bike in  Mumbai, he was on way to audition - India Todayಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ಜೈಸ್ವಾಲ್ ಅವರ ಬೈಕ್ ಗೆ ಟ್ರಕ್ ವೊಂದು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿದ್ದ ಜೈಸ್ವಾಲ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

TV Actor Aman Jaiswal, 23, Dies As Truck Rams His Bike In Mumbaiಟ್ರಕ್ ಚಾಲಕನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮುಂಬೈನ ಅಂಬೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

TV actor Aman Jaiswal, known for Dhartiputra Nandini, dies in Mumbai road  accident | Latest News India - Hindustan Timesಮೂಲತಃ ಉತ್ತರ ಪ್ರದೇಶದ ಅಮನ್ ಜೈಸ್ವಾಲ್ ಅವರು ಧರ್ತಿಪುತ್ರ ನಂದಿನಿ ಚಿತ್ರದ ಪ್ರಮುಖ ಪಾತ್ರಕ್ಕಾಗಿ ಖ್ಯಾತಿಯನ್ನು ಗಳಿಸಿದರು. ರವಿ ದುಬೆ ಮತ್ತು ಸರ್ಗುನ್ ಮೆಹ್ತಾ ನಿರ್ಮಿಸಿದ ಜನಪ್ರಿಯ ಶೋ ಉದಯನ್‌ನಲ್ಲಿ ಕಾಣಿಸಿಕೊಳ್ಳುವ ಮೊದಲು ಅವರು ಮಾಡೆಲ್ ಆಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!