ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ​ ಕೊಲೆ ಪ್ರಕರಣದ ತನಿಖೆ ಎನ್​​ಐಎಗೆ ಹಸ್ತಾಂತರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಂದು ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಿದೆ.

ಬಿಜೆಪಿ ಕಾರ್ಯಕರ್ತರು, ನಾಯಕರು ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕೆಂದು ಈ ಹಿಂದೆ ಪಟ್ಟು ಹಿಡಿದು ಪ್ರತಿಭಟಿಸಿದ್ದರು. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಅವರಿಗೆ ಮನವಿ ಸಲ್ಲಿಸಿತ್ತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ನಾಲ್ಕು ಪುಟಗಳ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದರು.

ಮೇ.01 ರಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!