ಕಾರ್ಕಳದಲ್ಲಿ ಹಿಂದೂ ಯುವತಿ ಮೇಲೆ ಅತ್ಯಾಚಾರ, ಕಾಂಗ್ರೆಸ್‌ ಸರ್ಕಾರದಡಿ ಹಿಂದೂಗಳಿಗೆ ರಕ್ಷಣೆಯಿಲ್ಲ: ಬಿಜೆಪಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾರ್ಕಳದಲ್ಲಿ ಹಿಂದೂ ಯುವತಿಗೆ ಮತ್ತು ಬರಿಸುವ ಔಷಧ ನೀಡಿ ಮುಸ್ಲಿಂ ಯುವಕ ಅತ್ಯಾಚಾರ ಎಸಗಿದ ಪ್ರಕರಣವನ್ನು ವಿಪಕ್ಷ ಬಿಜೆಪಿ ನಾಯಕರು ಖಂಡಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌  ಸರಕಾರ ಬಂದ ಬಳಿಕ ಹಿಂದೂಗಳಿಗೆ ರಕ್ಷಣೆಯೇ ಇಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಬಂದ ನಂತರ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲ ಎಂಬುದನ್ನು ತೋರಿಸುತ್ತಿದೆ. ಅತ್ಯಾಚಾರ ಮಾಡ್ತಾರೆ, ಇಲ್ಲ ಕೇಸ್ ಮುಚ್ಚಿ ಹಾಕ್ತಾರೆ. ಹಾವೇರಿ, ಹುಬ್ಬಳ್ಳಿಯಲ್ಲಿ ನಡೆದ ಘಟನೆ ಕಾರ್ಕಳದಲ್ಲಿ ಮರುಕಳಿಸಿದೆ ಎಂದು ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ.

ಕಾಂಗ್ರೆಸ್‌ ಮುಖಂಡ ಐವಾನ್ ಡಿಸೋಜಾನೇ ಭಾರತವನ್ನು ಬಾಂಗ್ಲಾ ದೇಶ ಮಾಡ್ತೀನಿ ಅಂತ ಹೇಳಿದ್ದಾನೆ. ಇವನ ಮೇಲೂ ಕಾಂಗ್ರೆಸ್‌ನವರು ಕ್ರಮ ತಗೊಂಡಿಲ್ಲ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕುಸಿದಿದೆ. ಅಧಿಕಾರ ನಡೆಸಲು ಕಾಂಗ್ರೆಸ್‌ನವರಿಗೆ ನೈತಿಕತೆ ಇಲ್ಲ. ಒಂದುವರೆ ವರ್ಷಗಳಿಂದ ಒಂದೇ ಒಂದು ರೂಪಾಯಿ ಅಭಿವೃದ್ಧಿ ಕೆಲಸಗಳು ಮಾಡಿಲ್ಲ ಎಂದು ಅಶೋಕ್‌ ಆರೋಪಿಸಿದ್ದಾರೆ.

ಕಾರ್ಕಳ ಶಾಸಕ ಸುನಿಲ್ ಕುಮಾರ್ , ಅತ್ಯಾಚಾರ ಕೃತ್ಯವನ್ನು ಖಂಡಿಸಿದ್ದಾರೆ. ಇದೊಂದು ಪೂರ್ವ ಯೋಜಿತ ಕೃತ್ಯವಾಗಿದೆ. ಅಮಲು ಬರಿಸುವ ವಸ್ತುವನ್ನ ನೀಡಿ ಅತ್ಯಾಚಾರ ಮಾಡಿದ್ದಾರೆ. ಕಾನೂನು ಸುವ್ಯವಸ್ಥೆ ಹಾಳಾಗುವ ಜೊತೆಗೆ, ಇಂತ ಕೃತ್ಯಗಳನ್ನ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಲವ್ ಜಿಹಾದ್‌ನಂತಹ ಪ್ರಕರಣಗಳ ಬಗ್ಗೆ ಸರ್ಕಾರ ಎಚ್ಚರ ವಹಿಸಬೇಕು ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!