Tuesday, August 16, 2022

Latest Posts

ಉದಯಪುರ ಹಿಂದು ಹತ್ಯೆ ಪ್ರಕರಣ:ಮಡಿಕೇರಿಯಲ್ಲಿ ಹಿಂದೂ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ವರದಿ ಮಡಿಕೇರಿ:
ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯಾ ಲಾಲ್ ಹತ್ಯೆ ಪ್ರಕರಣವನ್ನು ಖಂಡಿಸಿ ವಿವಿಧ ಹಿಂದೂಪರ ಸಂಘಟನೆಗಳು ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದವು.
ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯ ನಡುವೆಯೇ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ವಿಶ್ವಹಿಂದೂ ಪರಿಷದ್, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕನ್ಹಯ್ಯ ಲಾಲ್ ಹತ್ಯೆಯ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.
ಕೆಲಕಾಲ ರಸ್ತೆತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿ ಮನವಿ ಸಲ್ಲಿಸಿದರು.
ಪ್ರತಿಭಟನೆಯ ಪರಿಣಾಮ‌ ಮಡಿಕೇರಿ-ಮೈಸೂರು ಹಾಗೂ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತು.
ಪ್ರತಿಭಟನೆಯಲ್ಲಿ ರಾಜ್ಯ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಸಮಿತಿಯ ಅಧ್ಯಕ್ಷ ರವಿ ಕುಶಾಲಪ್ಪ, ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷ ಹಾಗೂ ವಕೀಲ ಕೃಷ್ಣಮೂರ್ತಿ, ಹಿಂದೂ ಜಾಗರಣ ವೇದಿಕೆಯ ಕುಕ್ಕೇರ ಅಜಿತ್, ನಗರಸಭೆಯ ಬಿಜೆಪಿ ಸದಸ್ಯರು, ವಿವಿಧ ಸಂಘಟನೆಗಳ ಪ್ರಮುಖರು ಭಾಗಿಯಾಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss