ಲವ್ ಜಿಹಾದ್ ಮಟ್ಟಹಾಕಲು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಪ್ರತಿಭಟನೆ

ಹೊಸದಿಗಂತ ವರದಿ ಹುಬ್ಬಳ್ಳಿ:‌ 

ಹಿಂದೂ ಜನ ಜಾಗೃತಿ ಸಮಿತಿಯ ವತಿಯಿಂದ ಶುಕ್ರವಾರ ದೇಶದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ ಪ್ರಕರಣಗಳನ್ನು ತಡೆಗಟ್ಟಬೇಕು ಎಂದು ಕೇಂದ್ರ ಹಾಗೂ ರಾಜ್ಯ ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದು ಒತ್ತಾಯಿಸಿದರು.‌ ನಗರದ ಮಿನಿವಿಧಾನ ಸೌಧದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ, ರಾಜ್ಯದಲ್ಲಿಯೂ ಲವ್ ಜಿಹಾದ್ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಿವೆ. ಈ ಕುರಿತು ಸರ್ಕಾರ ಕಠಿಣಕ್ರಮ ತೆಗೆದುಕೊಳ್ಳಬೇಕೆಂದು ತಹಶೀಲ್ದಾರ್’ಗೆ ಮನವಿ ಸಲ್ಲಿಸಿದರು.

ಮುಂಬೈ ಮೂಲದ ಹಿಂದೂ ಯುವತಿಯನ್ನು ಮುಸ್ಲಿಂ ವ್ಯಕ್ತಿಯೊಬ್ಬ 35 ತುಂಡುಗಳಾಗಿ ಕತ್ತರಿಸಿ, ಬರ್ಬರವಾಗಿ ಹತ್ಯೆಗೈದಿದ್ದು, ಅದರ ಹಿಂದೆ ಲವ್ ಜಿಹಾದ್ ಇರುವ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣ ಮಾಸುವ ಮುನ್ನವೇ ರಾಯಚೂರಿನಲ್ಲಿ ಹಿಂದೂ ಯುವತಿಯನ್ನು ಲವ್ ಜಿಹಾದ್’ಗೆ ಒಳಪಡಿಸಿದ ಪ್ರಕರಣ ಪತ್ತೆಯಾಗಿದೆ. ಉತ್ತರ ಪ್ರದೇಶ ಲಕ್ನೋದಲ್ಲಿಯೂ ಇಂತಹದ್ದೇ ಪ್ರಕರಣಗಳು ನಡೆಯುತ್ತಿವೆ. ಲವ್ ಜಿಹಾದ್ ತಡೆಯಲು ಕಠಿಣವಾದ ‘ಲವ್ ಜಿಹಾದ್ ಕಾಯ್ದೆ’ ಜಾರಿಗೆ ತರಬೇಕು’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!