ಹೊಸದಿಗಂತ, ಪುತ್ತೂರು:
ಹಿಂದೂ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಆದೇಶ ಮಾಡಲಾಗಿದ್ದು, ನಾಳೆ ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ ಅವಿನಾಶ್ ಅವರನ್ನು
ನಾಳೆ ವಿಚಾರಣೆಗೆ ಕರೆದಿದ್ದು, ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ದ.ಕ. ಜಿಲ್ಲಾ ವ್ಯಾಪ್ತಿಯಿಂದ ಬೀದರ್ ಗೆ ಗಡಿಪಾರು ಮಾಡಲಾಗುವುದು ಎಂದು ತಿಳಿಸಲಾಗಿದೆ.
ನೋಟಿಸ್ ನಲ್ಲಿ ಈ ಬಗ್ಗೆ ಉಲ್ಲೇಖ ಮಾಡಿರುವ ಸಹಾಯಕ ಆಯುಕ್ತರ ಕಚೇರಿ,ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಿಂದೂ ಮುಖಂಡ ಅವಿನಾಶ್ ಗೆ ಗಡಿಪಾರು ನೋಟಿಸ್ ನೀಡಲಾಗಿದೆ ಎಂದು ತಿಳಿಸಿದೆ.
ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ಗಡಿಪಾರು ನೋಟಿಸ್ ಹೊರಡಿಸಲಾಗಿದೆ.