October 1, 2026
Thursday, October 1, 2026
spot_img

ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಮಹೋತ್ಸವ: ವಿಸರ್ಜನೆ ಪ್ರಯುಕ್ತ ನಗರದಾದ್ಯಂತ ಬೃಹತ್ ಬೈಕ್ ರ‍್ಯಾಲಿ

ಹೊಸದಿಗಂತ ವರದಿ ಚಿತ್ರದುರ್ಗ:

ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ಪ್ರತಿ ವರ್ಷ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವ ‘ಹಿಂದೂ ಮಹಾಗಣಪತಿ ಮಹೋತ್ಸವ’ದ ಅಂಗವಾಗಿ ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ ವಿವಿಧ ಬಡಾವಣೆಗಳಲ್ಲಿ ಗುರುವಾರ ನಗರದಲ್ಲಿ ಬೈಕ್ ರ‍್ಯಾಲಿ ನಗರದ ನಡೆಸಲಾಯಿತು.

ಬಜರಂಗದಳದ ಕರ್ನಾಟಕ ದಕ್ಷಿಣದ ಪ್ರಾಂತ ಸಂಯೋಜಕ್ ಪ್ರಭಂಜನ್ ಸೂರ್ಯ ನಗರದ ಹೊಳಲ್ಕೆರೆ ರಸ್ತೆಯಲ್ಲಿನ ಕನಕ ವೃತ್ತದಲ್ಲಿ ಗುರುವಾರ ಬೆಳಿಗ್ಗೆ 10 ಗಂಟೆಗೆ ಬೈಕ್ ರ‍್ಯಾಲಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾದಾರ ಗುರುಪೀಠದ ಡಾ. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಬಿಜೆಪಿ ಮುಖಂಡರಾದ ಉಮೇಶ್ ಕಾರಜೋಳ, ಅನಿತ್‌ಕುಮಾರ್, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಚನ್ನಕೇಶವ, ಶಶಿಧರ್, ಬಸಮ್ಮ, ಬಿ.ಜಯಪ್ಪ, ಹಿಂದೂ ಮಹಾ ಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಜಿ.ಆರ್.ಸುದೀರ್, ನಗರಾಭಿವೃದ್ದಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಬದರಿನಾಥ್, ಅಶೋಕ್ ಕುಮಾರ್, ಕಾರ್ತಿಕ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಿಂದ ಪ್ರಾರಂಭಗೊಂಡ ಬೈಕ್ ರ‍್ಯಾಲಿ  ಸಂಗೊಳ್ಳಿ ರಾಯಣ್ಣ ವೃತ್ತ, ಬುರುಜನಹಟ್ಟಿ ಸರ್ಕಲ್, ಆನೆ ಬಾಗಿಲು, ಕೋಟೆ ರಸ್ತೆ, ಶ್ರೀ ಏಕನಾಥೇಶ್ವರಿ ಪಾದಗಟ್ಟೆ ವೃತ್ತ, ಕರುವಿನಕಟ್ಟೆ, ಜೋಗಿಮಟ್ಟಿ ರಸ್ತೆ, ಜಟ್‌ಪಟ್ ನಗರ, ಸ್ಟೇಡಿಯಂ ರಸ್ತೆ, ಬಿ.ಡಿ. ರಸ್ತೆ, ಮದಕರಿ ವೃತ್ತ, ಗಾಂಧಿ ವೃತ್ತ, ಎನ್.ಹೆಚ್.-4 ಸರ್ವಿಸ್ ರಸ್ತೆ, ಜೆ.ಸಿ.ಆರ್. ರಸ್ತೆ, ವಾಸವಿ ವೃತ್ತ, ಡಿ.ಸಿ. ವೃತ್ತ, ಅಂಬೇಡ್ಕರ್ ವೃತ್ತದ ಮುಖಾಂತರ ಹಳೇ ಮಾಧ್ಯಮಿಕ ಶಾಲಾ ಆವರಣಕ್ಕೆ ಆಗಮಿಸಿ ಮುಕ್ತಾಯವಾಯಿತು.

ಇದನ್ನೂ ಓದಿ:

 ಈ ಸಂದರ್ಭದಲ್ಲಿ ಸುಮಾರು 300 ರಿಂದ 500 ಬೈಕ್‌ಗಳು ರ‍್ಯಾಲಿಯಲ್ಲಿ ಭಾಗವಹಿಸಿದ್ದವು. ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಯುವಕರು ಕೇಸರಿ ಶಾಲುಗಳನ್ನು ಧರಿಸಿದ್ದರು. ತಮ್ಮ ಬೈಕ್‌ಗಳಿಗೆ ಬೃಹತ್ ಗಾತ್ರದ ಕೇಸರಿ ಧ್ವಜಗಳನ್ನು ಕಟ್ಟಿಕೊಂಡು ಮೆರವಣಿಗೆಯಲ್ಲಿ ಸಾಗುತ್ತಿದ್ದರು. ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಯುವಕರು ಜೈ ಶ್ರೀರಾಮ್, ಭಾರತ್ ಮಾತಾ ಕಿ ಜೈ, ಸನಾತನ ಧರ್ಮಕ್ಕೆ ಜೈ ಎಂದು ಘೋಷಣೆಗಳನ್ನು ಕೂಗುತ್ತಾ ಸಾಗುತ್ತಿದ್ದರು. ಬೈಕ್ ರ‍್ಯಾಲಿ ಹಾದು ಹೋಗುವ ಮಾರ್ಗಗಳ ಇಕ್ಕೆಲಗಳಲ್ಲಿ ಸಾರ್ವಜನಿಕರು ಸಾಲಾಗಿ ನಿಂತು ಬೈಕ್ ರ‍್ಯಾಲಿಗೆ ಬೆಂಬಲ ವ್ಯಕ್ತಪಡಿಸಿದರು.

Must Read