Saturday, August 13, 2022

Latest Posts

ಹೊಸ್ಕೇರಿಯಲ್ಲಿ ಶಿಕ್ಷಣ ಸಂಸ್ಥೆ ಸ್ಥಾಪನೆಗೆ ಹಿಂದೂ ಮಹಾಸಭಾ ವಿರೋಧ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………

ಹೊಸ ದಿಗಂತ ವರದಿ, ಮಡಿಕೇರಿ:

ಮಡಿಕೇರಿ ತಾಲೂಕಿನ ಹೊಸ್ಕೇರಿ ಗ್ರಾಮ ವ್ಯಾಪ್ತಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂತರರಾಷ್ಟ್ರೀಯ ಮಟ್ಟದ ಶಿಕ್ಷಣ ಸಂಸ್ಥೆಯ ಯೋಜನೆಯನ್ನು ಕೈಬಿಡದಿದ್ದಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ಜಿಲ್ಲಾಧ್ಯಕ್ಷ ಶ್ರೀನಿವಾಸ ರೈ ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊಡಗು ಜಿಲ್ಲೆ ಕಳೆದ ಮೂರು ವರ್ಷಗಳಿಂದ ಪ್ರಾಕೃತಿಕ ವಿಕೋಪದಿಂದ ನಲುಗಿ ಹೋಗಿದೆ. ಬೆಟ್ಟಗುಡ್ಡಗಳಿಗೆ ಹಾನಿ ಮಾಡಿದರೆ ಮತ್ತೆ ಅನಾಹುತಗಳು ಸಂಭವಿಸುವ ಅಪಾಯವಿದೆ. ಆದರೂ ಹೊಸ್ಕೇರಿ ವ್ಯಾಪ್ತಿಯಲ್ಲಿ ಬೃಹತ್ ಶಿಕ್ಷಣ ಸಂಸ್ಥೆ ಸ್ಥಾಪನೆಯ ಯೋಜನೆ ರೂಪಿಸಲಾಗಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಆರೋಪಿಸಿದ್ದಾರೆ.
ಏಕರೆಗಟ್ಟಲೆ ಜಮೀನಿನ ಮರಗಳನ್ನು ನಾಶ ಮಾಡಿ ಕಾಂಕ್ರಿಟ್ ಕಾಡನ್ನಾಗಿ ಪರಿವರ್ತಿಸಿ ಬೆಟ್ಟ, ಗುಡ್ಡಗಳಿಗೆ ಹಾನಿ ಮಾಡುವ ಸಾಧ್ಯತೆಗಳಿದೆ. ಈ ಯೋಜನೆಯಿಂದ ಹೊಸ್ಕೇರಿ ಭಾಗದಲ್ಲಿ ಪ್ರಾಕೃತಿಕ ಅಸಮತೋಲನ ಉಂಟಾಗಿ ಮುಂದೆ ಅಪಾಯ ಎದುರಾಗಬಹುದು. ಅಲ್ಲದೆ ಗ್ರಾಮದ ಜನರ ನಿತ್ಯ ಜೀವನಕ್ಕೂ ಅಡೆತಡೆಗಳು ಉಂಟಾಗಬಹುದು ಎಂದು ಆತಂಕ ವ್ಯಕ್ತಪಡಿಸಿರುವ ಶ್ರೀನಿವಾಸ ರೈ, ಅಂತರರಾಷ್ಟ್ರೀಯ ಮಟ್ಟದ ಶಿಕ್ಷಣ ಸಂಸ್ಥೆಯಿಂದ ಕೊಡಗಿಗೆ ಲಾಭವಿಲ್ಲವೆಂದು ಅಭಿಪ್ರಾಯಪಟ್ಟಿದ್ದಾರೆ.
ದೊಡ್ಡ ಮೊತ್ತದ ಶುಲ್ಕ ಪಾವತಿಸಿ ಮಕ್ಕಳನ್ನು ಸೇರ್ಪಡೆಗೊಳಿಸುವ ಶಕ್ತಿ ಹೊಂದಿರುವ ಪೋಷಕರು ಕೂಡ ಜಿಲ್ಲೆಯಲ್ಲಿಲ್ಲ. ಈ ಯೋಜನೆಯಿಂದ ಕೊಡಗಿಗೆ ನಷ್ಟವಾಗಲಿದೆಯೇ ಹೊರತು ಯಾವುದೇ ಲಾಭವಿಲ್ಲ. ಯೋಜನೆ ಕೈಗೆತ್ತಿಕೊಂಡಿರುವವರು ಎಷ್ಟೇ ಪ್ರಭಾವವಿಗಳಾಗಿದ್ದರೂ ಜಿಲ್ಲೆಯ ಪರಿಸರ ಮತ್ತು ಜನರ ಹಿತದೃಷ್ಟಿಯಿಂದ ಅನುಮತಿ ನೀಡಬಾರದು. ಒಂದು ವೇಳೆ ಅವಕಾಶ ನೀಡಿದರೆ ಹಿಂದೂ ಮಹಾಸಭಾದಿಂದ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss