ಹಿಂದು-ಮುಸ್ಲಿಮರು ಸಹೋದರರಂತೆ ಬದುಕಬೇಕು, ಅಹಿತಕರ ಘಟನೆಗಳು ಸಲ್ಲದು: ಬಿ.ಎಸ್.ಯಡಿಯೂರಪ್ಪ ಕಿವಿ ಮಾತು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸಮಾಜದಲ್ಲಿ ಹಿಂದು-ಮುಸ್ಲಿಮರು ಸಹೋದರರಂತೆ ಬದುಕಬೇಕು.ಅಹಿತಕರ ಘಟನೆಗಳು ಸಲ್ಲದು. ಇಂತಹ ಘಟನೆಗಳನ್ನು ನಿಲ್ಲಿಸಿ ಎಲ್ಲರೂ ಅವರವರ ಕೆಲಸ ಮಾಡಿಕೊಂಡಿರಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಿವಿ ಮಾತು ಹೇಳಿದರು.
ಬೆಂಗಳೂರುಅಧಿಕೃತ ನಿವಾಸ ಕಾವೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದು-ಮುಸ್ಲಿಮರು ಒಂದೇ ತಾಯಿಯ ಮಕ್ಕಳ ರೀತಿ ಬದುಕಬೇಕು ಎನ್ನುವುದು ನಮ್ಮ ಅಪೇಕ್ಷೆ ಎಂದರು.
ಇನ್ನು ಮುಂದೆ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ನಾನು ಕೂಡ ಸಮುದಾಯದವರಿಗೆ ಕಿವಿಮಾತು ಹೇಳುತ್ತೇನೆ. ಇದನ್ನು ನಿಲ್ಲಿಸಿ, ನಿಮ್ಮ ನಿಮ್ಮ ಕೆಲಸ ಮಾಡಿಕೊಂಡಿರಿ. ಎಲ್ಲರೂ ಸಹ ಸಂಯಮದಿಂದ ಗೌರವದಿಂದ ಬದುಕಲು ಬಿಡಿ ಎಂದರು.
ರಾಜ್ಯ ಪ್ರವಾಸ :
ಮೂರು ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡುತ್ತಿದ್ದೇವೆ. ಮೊದಲನೇ ತಂಡದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಎರಡನೇ ತಂಡದಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ನಾನು ಜೊತೆಗಿರುತ್ತೇನೆ, ಮೂರನೇ ತಂಡದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇರಲಿದ್ದಾರೆ.
ಮುಂದೆ ನಿರಂತರವಾಗಿ ಪ್ರವಾಸ ನಡೆಯಲಿದೆ. ಈಗ ಮೊದಲ ಹಂತದಲ್ಲಿ ಮೂರು ತಂಡಗಳಲ್ಲಿ ಪ್ರವಾಸ ಮಾಡುತ್ತಿದ್ದೇವೆ ಎಂದು ಯಡಿಯೂರಪ್ಪ ವಿವರ ನೀಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!