ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ನಾಗದೇವರ ಕಟ್ಟೆಗೆ ಸಲಾಂ ಎಂಬಾತ ಹಾನಿಯುಂಟು ಮಾಡಲು ಯತ್ನಿಸಿದ್ದು, ಈ ಘಟನೆಯನ್ನು ವಿಶ್ವ ಹಿಂದೂ ಪರಿಷತ್ ಭಜರಂಗದಳ ತೀವ್ರವಾಗಿ ಖಂಡಿಸಿದೆ.
ಹಿಂದೂ ವಿರೋಧಿ ಶಕ್ತಿಗಳು ವಿನಾ ಕಾರಣ ಹಿಂದುಗಳ ಆರಾಧನಾ ಸ್ಥಳಗಳಿಗೆ ಹಾನಿಯುಂಟು ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿದ್ದು, ಇಂತಹ ಮನಸ್ಥಿತಿಯ ವ್ಯಕ್ತಿಗಳ ಬಗ್ಗೆ ಸರಕಾರ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಆಗುವ ಅನಾಹುತಕ್ಕೆ ಇಲಾಖೆ ಹಾಗು ಸರಕಾರ ಹೊಣೆಯಾಗಬೇಕಾಗುತ್ತದೆ ಎಂದು ವಿಶ್ವ ಹಿಂದೂ ಪರಿಷದ್, ಬಜರಂಗದಳ ಪುತ್ತೂರು ಆಗ್ರಹಿಸಿದೆ.
ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಪ್ರಮುಖರಿಂದ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.