ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಮಂಡಿಸಿದ್ದ ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ (ತಿದ್ದುಪಡಿ) ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕಾಯ್ದಿರಿಸಿದ್ದಾರೆ.
ರಾಜ್ಯಪಾಲ ಗೆಹ್ಲೋಟ್ ಅವರು ಶುಕ್ರವಾರ ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ದತ್ತಿ (ತಿದ್ದುಪಡಿ) ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯ್ದಿರಿಸಿದ್ದಾರೆ.
ಈ ಮಸೂದೆಯು ಸಾಂವಿಧಾನಿಕ ನಿರ್ಬಂಧಗಳಿಗೆ ಒಳಪಡುತ್ತಿದೆ. ಪರಿಶೀಲನೆಯ ಅಗತ್ಯವಿದೆ. ಹೀಗಾಗಿ, ಹೆಚ್ಚಿನ ಸಾಂವಿಧಾನಿಕ ತೊಡಕುಗಳನ್ನು ನಿವಾರಿಸಲು ಪ್ರಸ್ತಾವಿತ ಮಸೂದೆಗೆ ಒಪ್ಪಿಗೆ ನೀಡುವ ಬದಲು, ಗೌರವಾನ್ವಿತ ರಾಷ್ಟ್ರಪತಿಗಳ ಪರಿಗಣನೆಗೆ ಕಾಯ್ದಿರಿಸುವುದು ಸೂಕ್ತವೆಂದು ನಾನು ಭಾವಿಸುತ್ತೇನೆ ಎಂದು ರಾಜ್ಯಪಾಲ ಗೆಹ್ಲೋಟ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಈ ಮಸೂದೆಯನ್ನು ಮಾರ್ಚ್ 6, 2024 ರಂದು ಅಂಗೀಕರಿಸಲಾಗಿತ್ತು. ಮೇ 16, 2025 ರಂದು ಹೊಸದಾಗಿ ರಾಜ್ಯಪಾಲರಿಗೆ ಸಲ್ಲಿಸಲಾಗಿತ್ತು. ಮಸೂದೆಯು ಹೆಚ್ಚಿನ ಆದಾಯ ಗಳಿಸುವ ದೇವಾಲಯಗಳಿಂದ ನಿಧಿಯ ಸಾಮಾನ್ಯ ನಿಧಿಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.