ಹೊಸದಿಗಂತ ಡಿಜಿಟಲ್ ಡೆಸ್ಕ್:
ದರಿದ್ರ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಕರ್ನಾಟಕದಲ್ಲಿ ಹಿಂದೂಗಳಿಗೆ ಅಪಮಾನ, ಹಿಂದೂ ಭಾವನೆಗೆ ಧಕ್ಕೆ ಆಗುತ್ತಿದೆ. ಹಿಂದೂಗಳ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ದೂರಿನಲ್ಲಿ ಹೆಣ್ಮಕ್ಕಳ ಮೇಲೆ ಲಾಠಿ ಚಾರ್ಜ್ ಮಾಡಿದ್ದು ಸಣ್ಣ ಘಟನೆ ಎಂದು ಗೃಹ ಸಚಿವರಿಗೆ ಮತ್ತು ಮುಖ್ಯಮಂತ್ರಿಗಳಿಗೆ ಅನಿಸುವುದಾದರೆ, ಲಜ್ಜೆಗೆಟ್ಟ ವರ್ತನೆ ರಾಜ್ಯ ಸರ್ಕಾರದ್ದು ಎಂದು ಖಂಡಿಸಿದ್ದಾರೆ.
ಮದ್ದೂರಿನಲ್ಲಿ ಇವತ್ತು ಹೆಣ್ಮಕ್ಕಳ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ದೇಶಾದ್ಯಂತ ಗಣೇಶ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಮಹಾರಾಷ್ಟ್ರ ಸೇರಿ ಎಲ್ಲ ರಾಜ್ಯಗಳಲ್ಲಿ ಗಣೇಶ ಹಬ್ಬ, ವಿಗ್ರಹ ವಿಸರ್ಜನೆ ವಿಜೃಂಭಣೆಯಿಂದ ನಡೆಯುತ್ತದೆ. ಕರ್ನಾಟಕದಲ್ಲಿ ಯಾಕೆ ಗಲಾಟೆ ಆಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.