ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆನಡಾದಲ್ಲಿ ಹಿಂದೂ ದೇವಾಲಯಗಳ ಮೇಲಿನ ಟಾರ್ಗೆಟ್ ಹೆಚ್ಚಾಗುತ್ತಲೇ ಇದೆ. ಇದೀಗ ಕೆನಡಾದ ಮಿಸ್ಸಿಸೌಗಾದ ರಾಮ ಮಂದಿರದ ಗೋಡೆಗಳ ಮೇಲೆ ಭಾರತ ವಿರೋಧಿ, ಹಿಂದೂ ವಿರೋಧಿ ಘೋಷಣೆಗಳನ್ನು ಬರೆದಿರುವ ಪ್ರಕರಣ ಬೆಳಕಿಗೆ ಬಂದಿದೆ.
ಟೊರೊಂಟೊದಲ್ಲಿರುವ ಭಾರತೀಯ ರಾಯಭಾರ ಕಚೇರಿ ಇದನ್ನು ತೀವ್ರವಾಗಿ ಖಂಡಿಸಿದೆ, ಕೆನಡಾದಲ್ಲಿ ಹಿಂದೂ ದೇವಾಲಯಗಳು ಟಾರ್ಗೆಟ್ ಆಗಿದ್ದು, ಕಳೆದ ವಾರವಷ್ಟೇ ಗೌರಿ ಶಂಕರ ದೇಗುಲದ ಗೋಡೆಗಳ ಮೇಲೆ ಹಿಂದೂ ವಿರೋಧಿ ಘೋಷಣೆಗಳನ್ನು ಬರೆಯಲಾಗಿತ್ತು ಎಂದಿದೆ. ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಕಳೆದ ವರ್ಷ ಬ್ರಾಂಪ್ಟನ್‌ನಲ್ಲಿ ಇಂತಹ ಮೂರು ಘಟನೆಗಳು ನಡೆದಿತ್ತು.