ಕೆನಡಾದಲ್ಲಿ ಹಿಂದು ದೇವಾಲಯ ಧ್ವಂಸ: ಬಾಗಿಲಿನಲ್ಲಿ ಉಗ್ರರ ಪೋಸ್ಟರ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೆನಡಾದ (Canada) ಬ್ರಿಟಿಷ್ ಕೊಲಂಬಿಯಾದಲ್ಲಿರುವ ಹಿಂದು ದೇವಾಲಯವನ್ನು (Hindu Temple) ಶನಿವಾರ ಮಧ್ಯರಾತ್ರಿ ಧ್ವಂಸಗೊಳಿಸಲಾಗಿದೆ.

ಈ ವೇಳೆ ಹತ್ಯೆಯಾಗಿರುವ ಖಲಿಸ್ತಾನಿ ಭಯೋತ್ಪಾದಕರ (Khalistani Terrorist’s) ಪೋಸ್ಟರ್‌ಗಳನ್ನು ದೇವಾಲಯದ ಮುಖ್ಯ ಬಾಗಿಲಿಗೆ ಅಂಟಿಸಿದ್ದು, ಜೂನ್ 18 ರ ಹತ್ಯೆಯಲ್ಲಿ ಭಾರತದ ಪಾತ್ರವನ್ನು ಕೆನಡಾ ತನಿಖೆ ಮಾಡುತ್ತದೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ಜೊತೆಗೆಹರ್ದೀಪ್ ಸಿಂಗ್ ನಿಜ್ಜರ್ ಫೋಟೋ ಕೂಡಹಾಕಲಾಗಿದೆ.

ಹರ್ದೀಪ್ ಸಿಂಗ್ ನಿಜ್ಜರ್ ಗುರುನಾನಕ್ ಸಿಖ್ ಗುರುದ್ವಾರ ಸಾಹಿಬ್‌ನ ಮುಖ್ಯಸ್ಥನಾಗಿದ್ದ. ಜೂನ್ 18 ರಂದು ಸಂಜೆ ಗುರುದ್ವಾರದ ಆವರಣದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಆತನನ್ನು ಕೊಂದಿದ್ದರು.

ಸರ್ರೆಯಲ್ಲಿರುವ ಲಕ್ಷ್ಮಿ ನಾರಾಯಣ ಮಂದಿರ ಧ್ವಂಸಗೊಳಿಸಲಾಗಿದ್ದು, ಬ್ರಿಟಿಷ್ ಕೊಲಂಬಿಯಾದಲ್ಲಿನ ಅತಿದೊಡ್ಡ ಮತ್ತು ಹಳೆಯ ಹಿಂದು ದೇವಾಲಯಗಳಲ್ಲಿ ಒಂದಾಗಿದೆ. ಕೆನಡಾದಲ್ಲಿ ಈ ವರ್ಷ ನಡೆದ ಮೂರನೇ ದೇವಸ್ಥಾನ ಧ್ವಂಸ ಘಟನೆ ಇದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!