ಹಿಂದೂ ಜಾಗರಣ ವೇದಿಕೆ ಕಾರ್ಯಾಚರಣೆ: ಗೋಮಾಂಸ ಸಹಿತ ಆರೋಪಿ ಬಂಧನ

ದಿಗಂತ ವರದಿ ಮಡಿಕೇರಿ:

ಗೋವನ್ನು ಹತ್ಯೆಗೈದು ಮಾಂಸ ಮಾಡಿ ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಸೋಮವಾರಪೇಟೆ ತಾಲೂಕಿನ ಕುಂಬೂರು ಗ್ರಾಮದ ಎ.ಜೆ.ಎಸ್ಟೇಟ್’ನ ಕೆಲವರ ಸಹಕಾರದೊಂದಿಗೆ ಅಸ್ಸಾಂ ಮೂಲದ ವ್ಯಕ್ತಿ ರಜಾಕ್ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಆತನ ಜೊತೆಯಲ್ಲಿದ್ದ 5-6 ಮಂದಿ ಕಾರ್ಮಿಕರು ಕತ್ತಲಲ್ಲಿ ಪರಾರಿಯಾಗಿದ್ದಾರೆ.
ಭಾನುವಾರ ರಾತ್ರಿ 8.30ರ ಸುಮಾರಿಗೆ ಎ.ಜೆ.ಎಸ್ಟೇಟ್’ನ ಕೆಲವರ ಸಹಕಾರದೊಂದಿಗೆ ಅಸ್ಸಾಂ ಮೂಲದ ಕಾರ್ಮಿಕರು ಗೋವನ್ನು ಹತ್ಯೆಗೈದು ಮಾಂಸ ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಹಿಂದೂ ಜಾಗರಣ ವೇದಿಕೆ ಹಾಗೂ ಸ್ಥಳೀಯ ಹಿಂದೂಪರ ಸಂಘಟನೆಗಳ‌ ಕಾರ್ಯಕರ್ತರು ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಆತನನ್ನು ಒಪ್ಪಿಸಲಾಗಿದ್ದು, ಕತ್ತಲಲ್ಲಿ ಪರಾರಿಯಾಗಿದ್ದ ಇತರ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಗೋಹತ್ಯೆ, ಗೋಮಾಂಸ ಮಾರಾಟ, ಅಕ್ರಮ ಗೋಸಾಗಾಟದಂತಹ ಪ್ರಕರಣಗಳು ನಡೆಯುತ್ತಲೇ ಇದ್ದು ಪೋಲೀಸ್ ಇಲಾಖೆ ಇವುಗಳನ್ನು ಮಟ್ಟ ಹಾಕುವಲ್ಲಿ ಸಂಪೂರ್ಣ ವಿಫಲವಾಗಿದೆಯೆಂದು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಸುನಿಲ್ ಮಾದಾಪುರ, ಕಾರ್ಯದರ್ಶಿ ವಿನು, ಜಿಲ್ಲಾ ಸಹ ಸಂಪರ್ಕ ಪ್ರಮುಖ್ ಉಮೇಶ್, ಹೊಸತೋಟ ಪ್ರಭ, ಯೋಗಾನಂದ ಕುಂಬೂರು, ಗಿರೀಶ್, ದೀಪು ಹಾಗೂ ಸ್ಥಳೀಯ ಕಾರ್ಯಕರ್ತರು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!