spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ತಪ್ಪಿದ ಲವ್ ಜಿಹಾದ್? ಯುವತಿಯನ್ನು ಬಿಟ್ಟು ಪರಾರಿಯಾದ ಯುವಕ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ ಶಿವಮೊಗ್ಗ:

ಹಿಂದು ಯುವತಿಗೆ ಆಮಿಷವೊಡ್ಡಿ ಕರೆದುಕೊಂಡು ಹೊರಟಿದ್ದ ಅನ್ಯ ಧರ್ಮೀಯ ಯುವಕನೋರ್ವ, ಹಿಂದು ಸಂಘಟನೆಗಳ ಕಾರ್ಯಕರ್ತರಿಗೆ ಹೆದರಿ ಯುವತಿಯನ್ನು ಮಧ್ಯ ದಾರಿಯಲ್ಲೇ ಬಿಟ್ಟು ಹೋಗಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ನಾರ್ವೆ ಗ್ರಾಮದ ಯುವತಿಯನ್ನು ಅದೇ ತಾಲೂಕಿನ ಅನ್ಯ ಧರ್ಮೀಯ ಯುವಕ ಸೋಮವಾರ ರಾತ್ರಿ ಕಾರಿನಲ್ಲಿ ಕರೆದುಕೊಂಡು ಪರಾರಿಯಾಗಲು ಮುಂದಾಗಿದ್ದ. ಬಸ್ ಏಜೆಂಟ್ ಕೆಲಸ ಮಾಡಿಕೊಂಡಿದ್ದ ಯುವಕ ತನ್ನ ಆತ್ಮೀಯರ ಕಾರು ಪಡೆದುಕೊಂಡು ಕೊಪ್ಪದಿಂದ ಶಿವಮೊಗ್ಗಕ್ಕೆ ಸೋಮವಾರ ರಾತ್ರಿ 11.30ರ ಸುಮಾರಿಗೆ ಆಗಮಿಸಿದ್ದ.
ಖಚಿತ ಮಾಹಿತಿ ಪಡೆದಿದ್ದ ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣಕ್ಕೆ ಅದೇ ವೇಳೆಗೆ ತೆರಳಿದ್ದರು. ಕೊಪ್ಪದಿಂದ ಬಂದ ಕಾರು ನೇರವಾಗಿ ಖಾಸಗಿ ಬಸ್ ನಿಲ್ದಾಣಕ್ಕೆ ಆಗಮಿಸಿತ್ತು. ಇದನ್ನು ಗಮನಿಸಿದ ಕಾರ್ಯಕರ್ತರು, ಪ್ರಯಾಣಿಕರ ರೀತಿಯಲ್ಲಿ ಹೋಗಿ ಮಾತನಾಡಿಸಿದರು. ಈ ವೇಳೆ ಯುವಕ ಅನುಮಾನಸ್ಪದವಾಗಿ ನಡೆದುಕೊಂಡಿದ್ದ. ಕೂಡಲೇ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಹಿಂದು ಸಂಘಟನೆ ಕಾರ್ಯಕರ್ತರು ಮಾತನಾಡಿಸಿದ್ದರಿಂದ ಅನುಮಾನಗೊಂಡ ಯುವಕ, ಯುವತಿ ಒಬ್ಬಳನ್ನೇ ಬಸ್ ನಿಲ್ದಾಣದಲ್ಲಿ ಬಿಟ್ಟು ಕಾರು ಸಮೇತ ನಾಪತ್ತೆಯಾಗಿದ್ದಾನೆ. ಬಳಿಕ ಪೊಲೀಸರು ಯುವತಿಯನ್ನು ಕರೆದೊಯ್ದಿದ್ದಾರೆ. ಸದ್ಯ ಯುವತಿಯನ್ನು ಶಿವಮೊಗ್ಗದ ಮಹಿಳಾ ಕೇಂದ್ರದಲ್ಲಿ ಇರಿಸಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss