Tuesday, July 5, 2022

Latest Posts

ಹಿಂದೂಗಳು ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಕಟ್ಟಿಟ್ಟಬುತ್ತಿ: ನಳಿನ್ ಕುಮಾರ್ ಕಟೀಲ್

ಹೊಸದಿಗಂತ ವರದಿ, ವಿಜಯನಗರ
ತೆಲಂಗಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಮುಸ್ಲಿಂರಿಗೆ ಹೆಚ್ಚಿನ ಅವಕಾಶ ನೀಡುವ ಮಾತಾಡಿದ್ದಾರೆ. ಇದು ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಪಕ್ಷ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷದ ನಿಲುವು ಬಯಲುಗೊಳಿಸಿದೆ. ಹಿಂದೂಗಳು ಎಚ್ಚೆತ್ತುಕೊಳ್ಳ ದಿದ್ದರೆ ಅಪಾಯ ಕಟ್ಟಿಟ್ಟಬುತ್ತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ವಿಜಯನಗರ ಜಿಲ್ಲೆಯ ಹೊಸಪೇಟೆ ಯಲ್ಲಿ ನಡೆಯುತ್ತಿರುವ ರಾಜ್ಯ ಬಿಜೆಪಿ ಕಾರ್ಯಕಾರಣಿ ಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ದೇಶದಲ್ಲಿ ತೀರಾ ದುರ್ಬಲಗೊಂಡಿದ್ದು, ಅದರಿಂದಾಗಿ ಹತಾಶರಾಗಿರುವ ಕಾಂಗ್ರೆಸ್ ನಾಯಕರು ಮನಬಂದಂತೆ ಬಿಜೆಪಿ ವಿರುದ್ಧ ಟೀಕೆ ಮಾಡುತ್ತಿದ್ದಾರೆಂದು ಆರೋಪಿಸಿದರು.
ಈಶ್ವರಪ್ಪ ಅವರನ್ನು ಬಂಧಿಸಲು ಕಾಂಗ್ರೆಸ್ ಹೋರಾಟ ಮಾಡುವುದಾದರೆ ನಾನೂ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕಾಂಗ್ರೆಸ್ ನ ಎಲ್ಲ ಹಿರಿಯ ನಾಯಕರನ್ನು ಬಂಧಿಸಲು ಆಗ್ರಹಿಸುವೆ. ಕಾಂಗ್ರೆಸ್ ಸರಕಾರದಲ್ಲಿ ಅನೇಕ‌ ಹಿಂದೂ ಯುವಕರ ನಿಗೂಢ ಕೊಲೆಯಾದಾಗಾ ಸಿಎಂ ಆಗಿದ್ದ ಸಿದ್ದರಾಮಯ್ಯ ಸ್ಥಳಕ್ಕೆ ತೆರಳುವವರೆಗೆ ಸಾವಿನ ವಿಚಾರ ಗೌಪ್ಯವಾಗಿಡಲಾಗಿತ್ತು ಎಂದು ಆರೋಪಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss