ಪಾಕಿಸ್ತಾನದಿಂದ ಬಂದ ಹಿಂದುಗಳಿಗೆ ಸಿಕ್ಕಿತು ಭಾರತದ ಪೌರತ್ವ: ಮೋದಿ, ಅಮಿತ್‌ ಶಾಗೆ ಧನ್ಯವಾದ ಹೇಳಿದ ಕುಟುಂಬ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ (Indian Citizenship) ನೀಡುವ ಸಲುವಾಗಿ ಜಾರಿ ತಂದ ಕಾಯ್ದೆಯಡಿ ಕೇಂದ್ರ ಸರ್ಕಾರವು (Central Government) 300 ಜನರಿಗೆ ಪೌರತ್ವ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಇದರ ಭಾಗವಾಗಿಯೇ 14 ಜನರಿಗೆ ಪೌರತ್ವ ಪ್ರಮಾಣಪತ್ರಗಳನ್ನು (Citizenship Papers) ಹಸ್ತಾಂತರಿಸಲಾಗಿದೆ.

ಹೀಗೆ, ಪಾಕಿಸ್ತಾನದಲ್ಲಿ ಬಹುಸಂಖ್ಯಾತರಿಂದ ಸಂಕಷ್ಟ ಅನುಭವಿಸಿ, ಭಾರತಕ್ಕೆ ಬಂದು ನೆಲೆಸಿದ ಹಿಂದುಗಳಿಗೆ ಪೌರತ್ವ ದೊರೆತಿದ್ದು, ಅವರ ಇಡೀ ಕುಟುಂಬವು ಸಂತಸ ವ್ಯಕ್ತಪಡಿಸಿದೆ.
ಪಾಕಿಸ್ತಾನದಿಂದ ಬಂದು, ದೆಹಲಿಯ ಆದರ್ಶ ನಗರದಲ್ಲಿ ವಾಸಿಸುತ್ತಿರುವ ಹಲವರಿಗೆ ಭಾರತದ ಪೌರತ್ವ ನೀಡಲಾಗಿದ್ದು, ಅವರೀಗ ಸಂತಸ ವ್ಯಕ್ತಪಡಿಸಿದ್ದಾರೆ.

ಮಹಿಳೆಯರು ಹಾಗೂ ಮಕ್ಕಳು ಸೇರಿ ಹಲವರು ಭಾರತದ ಪೌರತ್ವ ಹಿಡಿದಿರುವ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

“ಪಾಕಿಸ್ತಾನದಲ್ಲಿ ಹಿಂದು ಹೆಣ್ಣುಮಕ್ಕಳ ಸ್ಥಿತಿ ಶೋಚನೀಯವಾಗಿದೆ. ಹಿಂದು ಹೆಣ್ಣುಮಕ್ಕಳು ಶಿಕ್ಷಣ ಪಡೆಯುವುದು ಬಿಡಿ, ಮನೆಯಿಂದಲೂ ಹೊರಗೆ ಬರಲು ಆಗುವುದಿಲ್ಲ. ಮುಸ್ಲಿಮರು ಹಿಂದು ಹೆಣ್ಣುಮಕ್ಕಳನ್ನು ಅಪಹರಣ ಮಾಡುತ್ತಾರೆ. ಬಲವಂತವಾಗಿ ಮತಾಂತರ ಮಾಡುತ್ತಾರೆ, ಕಿರುಕುಳ ನೀಡುತ್ತಾರೆ. ಈಗ ಭಾರತದ ಪೌರತ್ವ ಸಿಕ್ಕಿರುವುದು ಖುಷಿಯಾಗಿದೆ. ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರಿಗೆ ಧನ್ಯವಾದಗಳು ಎಂದು ಸಿಎಎ ಅಡಿಯಲ್ಲಿ ಪೌರತ್ವ ಪಡೆದ ಭಾವನಾ ತಿಳಿಸಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!