ಹಿಂದೂಗಳು ಜನಸಂಖ್ಯೆ ಹೆಚ್ಚಿಸಿಕೊಳ್ಳಲು ಮುಸ್ಲಿಮರ ಸೂತ್ರವನ್ನೇ ಅನುಸರಿಸಿ: ಬದ್ರುದ್ದೀನ್ ಅಜ್ಮಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಅಸ್ಸಾಂ ರಾಜಕಾರಣಿ, ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಡಿಯುಎಫ್) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಶುಕ್ರವಾರ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಹಿಂದೂಗಳು ಜನಸಂಖ್ಯೆ ಹೆಚ್ಚಿಸಿಕೊಳ್ಳಲು ಮುಸ್ಲಿಮರ ಸೂತ್ರವನ್ನು ಅಳವಡಿಸಿಕೊಳ್ಳಬೇಕು ಮತ್ತು ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿಯೇ ಮದುವೆ ಮಾಡಬೇಕು ಎಂದು ಅವರು ಹೇಳಿದ್ದಾರೆ.
“ಮುಸ್ಲಿಂ ಪುರುಷರು 20-22 ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ, ಮತ್ತು ಮುಸ್ಲಿಂ ಮಹಿಳೆಯರು ಸಹ ಸರ್ಕಾರವು ಅನುಮತಿಸುವ 18 ನೇ ವಯಸ್ಸಿನಲ್ಲೇ ಮದುವೆಯಾಗುತ್ತಾರೆ. ಮತ್ತೊಂದೆಡೆ, ಅವರು [ಹಿಂದೂಗಳು] ಮದುವೆಗೆ ಮುಂಚೆ ಒಂದು, ಎರಡು ಅಥವಾ ಮೂರು ಅಕ್ರಮ ಹೆಂಡತಿಯರನ್ನು ಇಟ್ಟುಕೊಳ್ಳುತ್ತಾರೆ. “ಅವರು 40 ವರ್ಷ ವಯಸ್ಸಿನ ನಂತರ ಪೋಷಕರ ಒತ್ತಡಕ್ಕೆ ಮದುವೆಯಾಗುತ್ತಾರೆ. 40 ರ ನಂತರ ವಿವಾಹವಾಗಿ ಅವರು ಮಗುವನ್ನು ಹೇಗೆ ನಿರೀಕ್ಷಿಸಬಹುದು? ಎಂದು ಅಜ್ಮಲ್‌ ಪ್ರಶ್ನಿಸಿದ್ದಾರೆ.
ʼಹಿಂದೂಗಳು ಮುಸ್ಲಿಮರ ಸೂತ್ರವನ್ನು ಅನುಸರಿಸಬೇಕು. ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿ ಮದುವೆ ಮಾಡಬೇಕು. 20-22 ನೇ ವಯಸ್ಸಿನಲ್ಲಿ ಅವರಿಗೆ ಮದುವೆ ಮಾಡಿ, 18-20 ವರ್ಷಕ್ಕೆ ಹುಡುಗಿಯರ ಮದುವೆ ಮಾಡಿ, ಆಗ ನೋಡಿ ಎಷ್ಟು ಮಕ್ಕಳು ಜನಿಸುತ್ತಾರೆ” ಎಂದು ಅಜ್ಮಲ್‌ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!