ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳ ಕಾರು ಮರಕ್ಕೆ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಗದಗದ ನರೇಗಲ್ ನ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ತೆರಳುತ್ತಿದ್ದ ಕಾರು ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಶ್ರೀಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗದಗ ಜಿಲ್ಲೆಯ ನರಗುಂದ ಪಟ್ಟಣದ ಹೊರವಲಯದಲ್ಲಿ ನರೇಗಲ್ ನ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ತೆರಳುತ್ತಿದ್ದಂತ ಕಾರು, ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.
ಈ ಅಪಘಾತದಲ್ಲಿ ಚಾಲಕ ವೀರೇಶ ಕುರಡಗಿ (38) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಮಲ್ಲಿಕಾರ್ಜುನ ಶ್ರೀಗಳು ಕೂಡ ಗಾಯಗೊಂಡಿದ್ದು, ಗದಗದ ಕೆ ಎಲ್ ಇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!