Friday, December 26, 2025

ಹಿರಿಯೂರು ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಹುಬ್ಬಳ್ಳಿಯ KMCRIನಲ್ಲಿ ಬಸ್ ಚಾಲಕ ಸಾವು

ಹೊಸದಿಗಂತ ಹುಬ್ಬಳ್ಳಿ:

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಸ್ ಚಾಲಕ ಮೊಹಮ್ಮದ್ ರಫೀಕ್ ಹುಲಗೂರ (35) ಅವರು ಇಂದು ಬೆಳಿಗ್ಗೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ನಗರದ ಕಿಮ್ಸ್ (ಕೆಎಂಸಿಆರ್‌ಐ) ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ರಫೀಕ್, ಶುಕ್ರವಾರ ಬೆಳಿಗ್ಗೆ ಸುಮಾರು 8:30ಕ್ಕೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಈಶ್ವರ ಹಸಬಿ ಅಧಿಕೃತವಾಗಿ ತಿಳಿಸಿದ್ದಾರೆ.

ಅಪಘಾತದ ತೀವ್ರತೆಗೆ ರಫೀಕ್ ಅವರ ಹೊಟ್ಟೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿತ್ತು. ಇದರ ಪರಿಣಾಮವಾಗಿ ಅವರ ದೇಹದ ಬಹು ಅಂಗಾಂಗಗಳಿಗೆ ತೀವ್ರ ಹಾನಿಯಾಗಿತ್ತು. ತೀವ್ರ ಎದೆನೋವು ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ವೈದ್ಯರು ಸತತ ಚಿಕಿತ್ಸೆ ನೀಡಿದರೂ ಫಲಕಾರಿಯಾಗಲಿಲ್ಲ.

ಇದೇ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಮಹಮ್ಮದ್ ಸಾದಿಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಸ್ತುತ ಕೆಎಂಸಿಆರ್‌ಐನಲ್ಲಿ ಚಿಕಿತ್ಸೆ ಮುಂದುವರಿದಿದೆ. ಸಾದಿಕ್ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

error: Content is protected !!