Thursday, October 6, 2022

Latest Posts

ಇತಿಹಾಸಕಾರರ ವಿಚಾರಗಳು ಪ್ರಕಟಣೆಗೆ ಸೀಮಿತವಾಗದೇ ಮುಂದಿನ ಪೀಳಿಗೆಯ ಮಕ್ಕಳಿಗೆ ತಿಳಿ ಹೇಳುವ ಕೆಲಸವಾಗಲಿ: ಭಗವಂತ ಖೂಬಾ

ಹೊಸದಿಗಂತ ವರದಿ ಬೀದರ್:

ನಮ್ಮ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅನೇಕರು ದೇಶದ ವಿವಿಧ ಭಾಗಗಳಲ್ಲಿ ಹೋರಾಟ ಮಾಡಿದ್ದು ಇಂತಹ ಕಾರ್ಯಾಗಾರಗಳ ಮೂಲಕ ಅವರ ಹೆಸರನ್ನು ಸ್ಮರಿಸುತ್ತಿರುವುದು ಒಳ್ಳೆಯ ಕಾರ್ಯವಾಗಿದೆ ಎಂದು ನವೀಕರಿಸಬಹುದಾದ ಇಂಧನ ಮೂಲ ಮತ್ತು ರಾಸಾಯನಿಕ ರಸಗೊಬ್ಬರ ರಾಜ್ಯ ಖಾತೆ ಸಚಿವರಾದ ಭಗವಂತ ಖೂಬಾ ಹೇಳಿದರು.

ಅವರು ಶನಿವಾರ ಹೈದ್ರಾಬಾದ ಕರ್ನಾಟಕ ಪ್ರದೇಶದ ಇತಿಹಾಸ ರಚನಾ ಸಮಿತಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಇತಿಹಾಸ ಸಂಸ್ಕೃತಿ ಮತ್ತು ಅಭಿವೃದ್ಧಿಯ ಎರಡು ದಿನಗಳ ಕಾರ್ಯಾಗಾರವನ್ನು ಬೀದರ್‌ ನ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಮುಖ್ಯ ಸಭಾಂಗಣದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಲವಾರು ಹೋರಾಟಗಾರರ ಹೆಸರುಗಳು ಇತ್ತಿಚಿಗೆ ಬೆಳಕಿವೆ ಬರುತ್ತಿವೆ ಆಜಾದಿಕಾ ಅಮೃತ ಮಹೋತ್ಸವ ಸಂದರ್ಭದಲ್ಲಿ ಹಲವಾರು ಇತಿಹಾಸಕಾರರ ಇತಿಹಾಸವನ್ನು ನಾವು ತಿಳಿದುಕೊಳ್ಳುತ್ತಿದ್ದೇವೆ. ಡಿ.ಡಿ.ಚಂದನ ವಾಹಿನಿಯಲ್ಲಿ ಪ್ರತಿದಿನ ಬೆಳಿಗ್ಗೆ ಸ್ವಾತಂತ್ರ್ಯ ಹೋರಾಟಗಾರರ ಇತಿಹಾಸವನ್ನು ತಿಳಿಸುವ ಕಾರ್ಯಕ್ರಮ ಪ್ರಸಾರವಾಗುತ್ತಿದೆ. ಇತಿಹಾಸ ತಜ್ಞರು ನಿಜವಾದ ಇತಿಹಾಸದ ಸತ್ಯವನ್ನು ಹೊರಹಾಕುವ ಎದೆಗಾರಿಕೆಯನ್ನು ಹೊಂದಿರಬೇಕು ಎಂದು ಹೇಳಿದರು.

ಸಾಹಿತಿಗಳು, ಇತಿಹಾಸಕಾರರ ವಿಚಾರಗಳು ಪ್ರಕಟಣೆಗೆ ಸೀಮಿತವಾಗದೇ ಚರ್ಚೆಯಾಗಲಿ, ನಮ್ಮ ಭಾಗದ ಗೊತ್ತಿಲ್ಲದ ಇತಿಹಾಸವನ್ನು ನಮ್ಮ ಮಕ್ಕಳಿಗೆ ತಿಳಿಹೇಳಬೇಕು. ಹೈದ್ರಾಬಾದ ಕರ್ನಾಟಕ ಪ್ರದೇಶದ ಇತಿಹಾಸ ರಚನಾ ಸಮಿತಿಯ ವರದಿಯ ಮೇಲೆ ಈ ಭಾಗದ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡುತ್ತದೆ. ಅಂತಹ ಮಾದರಿ ಕೆಲಸವಾಗಲಿ ಎಂದು ಅವರು ಅಭಿಪ್ರಾಯಪಟ್ಟರು

ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಅವರು ಮಾತನಾಡಿ ಇಂತಹ ಕಾರ್ಯಾಗಾರಗಳ ಮೂಲಕ ನಮ್ಮ ಭಾಗಕ್ಕೆ ಏನು ಬೇಕು ಮತ್ತು ಈ ಭಾಗದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ, ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಕೆ.ಸಿ.ವೀರಣ್ಣ, ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿಯ ಕುಲಪತಿಗಳಾದ ಪ್ರೊ.ದಯಾನಂದ ಅಗಸರ, ನವನಿಹಾಳ ಸತ್ಯಸಾಯಿ ಯುನಿವರ್ಸಿಟಿ ಫಾರ ಹ್ಯೂಮನ ಎಕ್ಸಲೆನ್ಸಿಯ ಕುಲಪತಿಗಳಾದ ಪ್ರೊ.ಶ್ರೀಕಂಠ ಮೂರ್ತಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ., ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರಬಾಬು, ಹೈದ್ರಾಬಾದ ಕರ್ನಾಟಕ ಪ್ರದೇಶ ಇತಿಹಾಸ ರಚನಾ ಸಮಿತಿಯ ಸದಸ್ಯ ಕಾರ್ಯದರ್ಶಿ ಲಕ್ಷ್ಮಣ ದಸ್ತಿ, ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವ ಎಸ್.ಶಿವಶಂಕರ,ಇತಿಹಾಸ ತಜ್ಞ ಮತ್ತು ಸಂಶೋಧಕ ಡಾ.ಬಿ.ಸಿ.ಮಹಾಬಲೇಶ್ವರಪ್ಪ, ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಡೀನ್‌ ಪ್ರೊ.ದಿಲೀಪಕುಮಾರ ಸೇರಿದಂತೆ ಸಂಪನ್ಮೂಲ ತಜ್ಞರು ಹಾಗೂ ಪಶು ವಿಶ್ವವಿದ್ಯಾಲಯದ ಉಪನ್ಯಾಸಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!