ಹೊಸದಿಗಂತ ಡಿಜಿಟಲ್ ಡೆಸ್ಕ್:
ಐತಿಹಾಸಿಕ ಬೆಂಗಳೂರು ಕರಗ ಶಕ್ತೋತ್ಸವಕ್ಕೆ ಚಾಲನೆ ಸಿಕ್ಕಿದೆ. ಅರ್ಚಕ ವಿ. ಜ್ಞಾನೇಂದ್ರ ಅವರು 15ನೇ ಬಾರಿಗೆ ಕರಗವನ್ನು ಹೊತ್ತಿದ್ದಾರೆ. ಚೈತ್ರಮಾಸದ ಚೈತ್ರ ಪೌರ್ಣಿಮೆಯ ಚಂದ್ರನ ಬೆಳಕಿನಲ್ಲಿ ಕರಗ ಉತ್ಸವ ನಡೆದಿದೆ.
ಉತ್ಸವ ಸಾಗುವ ದಾರಿ ಉದ್ದಕ್ಕೂ ಭಕ್ತರು ಗೋವಿಂದ, ಗೋವಿಂದ ಎಂದು ನಾಮಸ್ಮರಣೆ ಮಾಡುತ್ತಾ ಭಕ್ತರು ಕರಗಕ್ಕೆ ಮಲ್ಲಿಗೆ ಹೂವು ಅರ್ಪಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೂಡ ಕರಗ ದರುಶನ ಪಡೆದಿದ್ದಾರೆ.
ತಿಗಳರಪೇಟೆಯ ಧರ್ಮರಾಯಸ್ವಾಮಿ ದೇಗುಲದಿಂದ ಆರಂಭವಾಗುವ ಕರಗ, ದೇವಸ್ಥಾನದ ಹೊರಭಾಗದಲ್ಲಿರುವ ಗಣಪತಿ, ಮುತ್ಯಾಲಮ್ಮ ದೇವಿಗೆ ಪೂಜೆ ಸಲ್ಲಿಸಿ, ಬಳಿಕ ಹಲಸೂರುಪೇಟೆಯ ಆಂಜನೇಯಸ್ವಾಮಿ, ಶ್ರೀರಾಮ ದೇವಾಲಯಕ್ಕೆ ತೆರಳುತ್ತದೆ.