ಐತಿಹಾಸಿಕ ಸಮಾವೇಶ, ಬೆಳಗಾವಿ ಸುವರ್ಣಸೌಧದ ಎದುರು ಗಾಂಧಿ ಪ್ರತಿಮೆ ಲೋಕಾರ್ಪಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ‌ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮಾ ಗಾಂಧೀಜಿಯವರ ಬೃಹತ್ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಾಗಿದೆ.

ಮಂಗಳವಾರ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚರಕ ತಿರುಗಿಸುವ ಮೂಲಕ ಲೋಕಾರ್ಪಣೆಗೊಳಿಸಿದರು. ಇದೇ ವೇಳೆ ಗದಗ ಗ್ರಾಮೀಣ ವಿವಿಗೆ ʻಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ವಿವಿʼ ಎಂದು ಮರು ನಾಮಕರಣ ಮಾಡಲಾಯಿತು. ಜೊತೆಗೆ ʻಗಾಂಧಿ ಭಾರತʼ ವಿಶೇಷ ಸ್ಟಾಂಪ್ ಸಹ ಬಿಡುಗಡೆಗೊಳಿಸಲಾಯಿತು.

ಸಮಾರಂಭದಲ್ಲಿ ಕಾಂಗ್ರೆಸ್ ನಾಯಕಿ, ಲೋಕಸಭೆ ಸದಸ್ಯೆ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ಧರಾಮಯ್ಯ  ಕಾರ್ಯಕ್ರಮದ‌ ಅಧ್ಯಕ್ಷತೆ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ , ಕರ್ನಾಟಕ ವಿಧಾನ‌ಸಭೆ ಸಭಾಧ್ಯಕ್ಷ ಯು.ಟಿ ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!