ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆಗೆ ನೀರಾವರಿ ಇಲಾಖೆಯಿಂದ 1,970 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಮಂಡ್ಯ ಜಿಲ್ಲೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡಿದ ಉದಾಹರಣೆಯೇ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಜಿಲ್ಲೆಯ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಮಂಡ್ಯ ಜಿಲ್ಲೆಯ ರೈತರ ಬದುಕಿನ ಉನ್ನತಿ ಸೇರಿದಂತೆ ಎಲ್ಲರ ಸರ್ವತೋಮುಖ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ಸಿದ್ದರಾಮಯ್ಯ ಅವರ ಸರ್ಕಾರ ಪಣತೊಟ್ಟಿದೆ ಎಂದು ತಿಳಿಸಿದರು.
ಮಳವಳ್ಳಿಯ ಜನಪ್ರಿಯ ಶಾಸಕರಾದ ನರೇಂದ್ರ ಸ್ವಾಮಿ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಗೆ 300 ಕೋಟಿ ರೂ. ಅನುದಾನ ತಂದಿದ್ದಾರೆ. ಮಂಡ್ಯದ ಜನತೆಯ ಸೇವೆಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ನಾವು ನಿಮ್ಮ ನಂಬಿಕೆ ಉಳಿಸಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ. ಅಧಿಕಾರಿಗಳು ಸಹ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಕೆಲವೊಬ್ಬರು ಜಿಲ್ಲೆಯಲ್ಲಿ ಶಾಂತಿಭಂಗ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದರು.