August 20, 2026
Thursday, August 20, 2026
spot_img

ಅಮೆರಿಕ-ಇರಾನ್ ಚಾರಿತ್ರಿಕ ಒಪ್ಪಂದ: ನೌಕಾ ದಿಗ್ಬಂಧನ ತಕ್ಷಣವೇ ರದ್ದು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇರಾನ್ ದೇಶದೊಂದಿಗೆ ಶಾಂತಿ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕೃತವಾಗಿ ಘೋಷಿಸಿದ್ದಾರೆ.

ತಮ್ಮ ‘ಟ್ರೂತ್ ಸೋಶಿಯಲ್’ ಜಾಲತಾಣದಲ್ಲಿ ಈ ವಿಷಯ ಹಂಚಿಕೊಂಡಿರುವ ಅವರು, ಹಾರ್ಮುಜ್ ಜಲಸಂಧಿಯನ್ನು ಯಾವುದೇ ಟೋಲ್ ಇಲ್ಲದೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಅಮೆರಿಕ ವಿಧಿಸಿದ್ದ ನೌಕಾ ದಿಗ್ಬಂಧನವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹಿಂತೆಗೆದುಕೊಳ್ಳಲಾಗುತ್ತಿದ್ದು, ಜಾಗತಿಕ ತೈಲ ಸರಬರಾಜು ಸುಗಮಗೊಳ್ಳಲಿದೆ ಎಂದು ಅವರು ಆಶಿಸಿದ್ದಾರೆ.

ಮಿಲಿಟರಿ ಕಾರ್ಯಾಚರಣೆಗೆ ಬ್ರೇಕ್: ಶೆಹಬಾಜ್ ಷರೀಫ್ ಟ್ವೀಟ್

ಈ ಮಹತ್ವದ ಒಪ್ಪಂದವನ್ನು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಸ್ವಾಗತಿಸಿದ್ದಾರೆ. ತಮ್ಮ ‘X’ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸುದೀರ್ಘ ಮಾತುಕತೆಗಳ ಬಳಿಕ ಅಮೆರಿಕ ಮತ್ತು ಇರಾನ್ ಶಾಂತಿ ಒಪ್ಪಂದಕ್ಕೆ ಬಂದಿರುವುದು ಸಂತಸದ ಸಂಗತಿ ಎಂದಿದ್ದಾರೆ. ಲೆಬನಾನ್ ಸೇರಿದಂತೆ ವಿವಿಧ ಪ್ರಾಂತ್ಯಗಳಲ್ಲಿ ನಡೆಯುತ್ತಿದ್ದ ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ಉಭಯ ದೇಶಗಳು ತಕ್ಷಣದಿಂದಲೇ ಶಾಶ್ವತವಾಗಿ ನಿಲ್ಲಿಸಲು ಒಪ್ಪಿಕೊಂಡಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !