August 28, 2026
Friday, August 28, 2026
spot_img

ಐತಿಹಾಸಿಕ ತೀರ್ಪು: ಭೋಜಶಾಲಾ ಆವರಣದಲ್ಲಿ ಹನುಮಾನ್ ಚಾಲೀಸಾ ಪಠಿಸಿದ ಭಕ್ತರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ವರ್ಷಗಳಿಂದ ಕಾನೂನು ಹೋರಾಟಕ್ಕೆ ಕಾರಣವಾಗಿದ್ದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲೆ-ಕಮಲ್ ಮೌಲಾ ಮಸೀದಿ ಸಂಕೀರ್ಣವನ್ನು ಮಧ್ಯಪ್ರದೇಶ ಹೈಕೋರ್ಟ್ ಇತಿಹಾಸ ಪ್ರಸಿದ್ಧ “ಸರಸ್ವತಿ ದೇವಿ ದೇವಸ್ಥಾನ” ಎಂದು ಘೋಷಿಸಿದೆ.

ಹೈಕೋರ್ಟ್‌ನ ಇಂದೋರ್ ಪೀಠವು ಈ ಸಂಕೀರ್ಣವು ರಾಜಭೋಜ ನಿರ್ಮಿಸಿದ ವಾಗ್ ದೇವಿ (ಸರಸ್ವತಿ) ದೇವಸ್ಥಾನ ಮತ್ತು ಸಂಸ್ಕೃತ ಅಧ್ಯಯನ ಕೇಂದ್ರವಾಗಿತ್ತು ಎಂಬುದನ್ನು ಪುರಾತತ್ವ ಇಲಾಖೆಯ ವೈಜ್ಞಾನಿಕ ಸಮೀಕ್ಷೆಯ ಆಧಾರದ ಮೇಲೆ ಖಚಿತಪಡಿಸಿದೆ. ಇದರೊಂದಿಗೆ ಈ ಹಿಂದೆ ಮುಸ್ಲಿಮರಿಗೆ ಶುಕ್ರವಾರ ನಮಾಜ್ ಮಾಡಲು ನೀಡಲಾಗಿದ್ದ ಅನುಮತಿಯನ್ನು ಕೋರ್ಟ್ ರದ್ದುಗೊಳಿಸಿದ್ದು, ಮುಸ್ಲಿಂ ಸಮುದಾಯಕ್ಕೆ ಮಸೀದಿ ನಿರ್ಮಾಣಕ್ಕಾಗಿ ಪರ್ಯಾಯ ಜಾಗ ನೀಡುವಂತೆ ಸರ್ಕಾರಕ್ಕೆ ಸೂಚಿಸಿದೆ.

ನ್ಯಾಯಾಲಯದ ಈ ಐತಿಹಾಸಿಕ ತೀರ್ಪಿನ ಮರುದಿನವೇ ಭೋಜ ಉತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ನೂರಾರು ಹಿಂದೂ ಭಕ್ತರು ಭೋಜಶಾಲೆ ಸಂಕೀರ್ಣದಲ್ಲಿ ಜಮಾಯಿಸಿ, ವಿಶೇಷ ಪ್ರಾರ್ಥನೆ ಮತ್ತು ಮಹಾ ಆರತಿ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಭಕ್ತರೆಲ್ಲರೂ ಒಟ್ಟಾಗಿ ಹನುಮಾನ್ ಚಾಲೀಸಾವನ್ನು ಪಠಿಸುವ ಮೂಲಕ ಸಂಭ್ರಮ ಆಚರಿಸಿದರು. ಕ್ಷೇತ್ರಕ್ಕೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !