Sunday, February 5, 2023

Latest Posts

ಐತಿಹಾಸಿಕ ಗೆಲುವು: ಗುಜರಾತ್ ಜನತೆಗೆ ಅಭಿನಂದನೆ ಸಲ್ಲಿಸಿದ ಅಮಿತ್ ಶಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಗುಜರಾತ್‌ನಲ್ಲಿ ಬಿಜೆಪಿ ಜಯಗಳಿಸುತ್ತಿದ್ದಂತೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು, ಗುಜರಾತ್ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ದಾಖಲೆಗಳನ್ನು ಸೃಷ್ಟಿಸಿದ್ದು, 150 ಕ್ಕೂ ಹೆಚ್ಚು ಸ್ಥಾನವನ್ನು ಬಾಚಿಕೊಂಡಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಶಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ . ಜತೆಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಬಿಜೆಪಿ ರಾಜ್ಯಾಧ್ಯಕ್ಷ ಸಿಆರ್ ಪಾಟೀಲ್ ಸೇರಿದಂತೆ ಪಕ್ಷದ ಗೆಲುವಿಗೆ ಶ್ರಮಿಸಿದವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇದರ ಜೊತೆಗೆ ಉಚಿತ ಹಾಗೂ ತುಷ್ಟೀಕರಣದ ರಾಜಕೀಯ ಮಾಡುವವರನ್ನು ತಿರಸ್ಕರಿಸುವ ಮೂಲಕ ಗುಜರಾತ್‌ನ ಜನರು ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣವನ್ನು ನಿರೂಪಿಸುವ ನರೇಂದ್ರ ಮೋದಿಯವರ ಬಿಜೆಪಿಗೆ ಅಭೂತಪೂರ್ವವಾದ ಗೆಲುವು ತಂದುಕೊಡುತ್ತಿದೆ ಅಪ್ ಗೆ ತಿರುಗೇಟು ನೀಡಿದ್ದಾರೆ.

ಮಹಿಳೆಯರು, ಯುವಕರು, ರೈತರು ಮಾತ್ರವಲ್ಲದೇ ಎಲ್ಲಾ ವರ್ಗದ ಜನರೂ ಬಿಜೆಪಿಯೊಂದಿಗಿದ್ದಾರೆ ಎಂಬುದನ್ನು ಈ ಬೃಹತ್ ಗೆಲುವು ತೋರಿಸಿಕೊಟ್ಟಿದೆ. ಗುಜರಾತ್ ಯಾವಾಗಲೂ ಇತಿಹಾಸವನ್ನು ಸೃಷ್ಟಿಸುತ್ತಾ ಬಂದಿದೆ. ಕಳೆದ 2 ದಶಕಗಳಲ್ಲಿ ಮೋದಿಯವರ ನಾಯಕತ್ವದಲ್ಲಿ ಬಿಜೆಪಿ ಎಲ್ಲಾ ರೀತಿಯ ಅಭಿವೃದ್ಧಿಯ ದಾಖಲೆಗಳನ್ನು ಮುರಿದಿದೆ.

ಗುಜರಾತ್‌ನಲ್ಲಿ ಇಂದು ಅಲ್ಲಿನ ಜನರು ಬಿಜೆಪಿಯನ್ನು ಆಶೀರ್ವದಿಸಿದ್ದಾರೆ ಹಾಗೂ ವಿಜಯದ ಎಲ್ಲಾ ದಾಖಲೆಗಳನ್ನೂ ಮುರಿದಿದ್ದಾರೆ. ಇದು ಮೋದಿಯವರ ಅಭಿವೃದ್ಧಿ ಮಾದರಿಯಲ್ಲಿ ಸಾರ್ವಜನಿಕರ ಅಚಲ ನಂಬಿಕೆಯ ವಿಜಯವಾಗಿದೆ ಎಂದು ಅಮಿತ್ ಶಾ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!