ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದೋರ್‌ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಆತಿಥೇಯ ಭಾರತವನ್ನು 41 ರನ್‌ಗಳಿಂದ ಮಣಿಸಿ, 2-1 ಅಂತರದಲ್ಲಿ ಏಕದಿನ ಸರಣಿಯನ್ನು ಮುಡಿಗೇರಿಸಿಕೊಂಡಿದೆ.
ಡ್ಯಾರಿಲ್ ಮಿಚೆಲ್ ಹಾಗೂ ಗ್ಲೆನ್ ಫಿಲಿಪ್ಸ್ ಅವರ ಅಮೋಘ ಶತಕಗಳ ಬಲದಿಂದ ಕಿವೀಸ್ ತಂಡ 337 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ಗುರಿ ಬೆನ್ನಟ್ಟಿದ ಭಾರತಕ್ಕೆ ವಿರಾಟ್ ಕೊಹ್ಲಿ ಆಸರೆಯಾದರಾದರೂ, ಇತರ ಬ್ಯಾಟರ್‌ಗಳ ವೈಫಲ್ಯದಿಂದಾಗಿ ತಂಡ ಸೋಲೊಪ್ಪಿಕೊಂಡಿತು.
ಈ ಮೂಲಕ ಟೆಸ್ಟ್ ಸರಣಿಯ ನಂತರ ಏಕದಿನ ಸರಣಿಯನ್ನೂ ಗೆಲ್ಲುವ ಮೂಲಕ ನ್ಯೂಜಿಲೆಂಡ್ ಭಾರತದ ನೆಲದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ.


