ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಫೈನಲ್ ಪಂದ್ಯದಲ್ಲಿ ಆತಿಥೇಯ ಚೀನಾ ತಂಡವನ್ನು 1-0 ಗೋಲುಗಳಿಂದ ಮಣಿಸಿದ ಭಾರತ ಹಾಕಿ ತಂಡ ದಾಖಲೆಯ 5ನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.
ತೀವ್ರ ರೋಚಕತೆಯಿಂದ ಕೂಡಿದ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಸಮಬಲದ ಹೋರಾಟ ಕಂಡುಬಂತು. ಮೊದಲ ಮೂರು ಕ್ವಾರ್ಟರ್ಗಳಲ್ಲಿ ಯಾವ ತಂಡಕ್ಕೂ ಗೋಲು ದಾಖಲಿಸಲು ಸಾಧ್ಯವಾಗಲಿಲ್ಲ. ಆದರೆ ನಾಲ್ಕನೇ ಕ್ವಾರ್ಟರ್ನಲ್ಲಿ ಗೋಲು ದಾಖಲಿಸುವಲ್ಲಿ ಯಶಸ್ವಿಯಾದ ಭಾರತ ತನ್ನ ಚಾಂಪಿಯನ್ ಪಟ್ಟವನ್ನು ಹಾಗೆಯೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು.