ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ 47ನೇ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಈ ಸಂದರ್ಭದಲ್ಲಿ ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಪ್ರಧಾನಿ ಮೋದಿ ಎದುರು ನೋಡುತ್ತಿದ್ದಾರೆ ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ.
ಜನರನ್ನು ಸಬಲೀಕರಣಗೊಳಿಸಲು ಮತ್ತು ಜಗತ್ತಿನಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ ಎಂದು ಹೇಳಿದ್ದಾರೆ.