ಮೇಲ್ಮನೆಯಲ್ಲೂ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸರ್ವಾನುಮತದ ಅಂಗೀಕಾರ 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವಿಧಾನಸಭೆಗಳಲ್ಲಿ (ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳು) ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸಲು ಕೇಂದ್ರ ಸರಕಾರ ತಂದಿದ್ದ ಮಹಿಳಾ ಮೀಸಲಾತಿ ಮಸೂದೆಗೆ ರಾಜ್ಯಸಭೆಯಲ್ಲೂ ಗುರುವಾರ ರಾತ್ರಿ ಅನುಮೋದನೆ ಸಿಕ್ಕಿದೆ. ಡಿಜಿಟಲ್ ಸಾಧನದ ಮೂಲಕ ನಡೆದ ಮತದಾನದಲ್ಲಿ ಸದಸ್ಯರು ಸರ್ವಾನುಮತದಿಂದ ಮಸೂದೆಯನ್ನು ಅನುಮೋದಿಸಿದರು. 215 ಸದಸ್ಯರು ಮಸೂದೆಯ ಪರವಾಗಿ ಮತ ಚಲಾಯಿಸಿದರೆ, ವಿರೋಧವಾಗಿ ಒಂದು ಮತವೂ ಬಂದಿಲ್ಲ.

ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದು, ಇದೀಗ ರಾಜ್ಯಸಭೆಯಲ್ಲೂ ಅಂಗೀಕಾರವಾಗಿದೆ.  ಸಂಸತ್ತಿನ ಎರಡೂ ಸದನಗಳು ಈ ಮಸೂದೆಗೆ ತಮ್ಮ ಅನುಮೋದನೆಯ ಮುದ್ರೆಯನ್ನು ನೀಡಿದ್ದು, ಇನ್ನು ಕೊನೆಯ ಹಂತ ಮಾತ್ರ ಇದೆ. ಈ ಮಸೂದೆಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುವುದು. ವಿಧೇಯಕಕ್ಕೆ ರಾಷ್ಟ್ರಪತಿಗಳ ಸಹಿ ಬೀಳುತ್ತಿದ್ದಂತೆ ಮಹಿಳಾ ಮೀಸಲಾತಿ ಮಸೂದೆಯು, ಮಹಿಳಾ ಮೀಸಲಾತಿ ಕಾಯ್ದೆಯಾಗಲಿದೆ.

ಪ್ರಧಾನಿ ಮೋದಿ ಧನ್ಯವಾದ

ಉಭಯ ಸದನಗಳಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು..ಈ ಮಸೂದೆಯನ್ನು ಬೆಂಬಲಿಸಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು. ಇನ್ನು ಮುಂದೆ ದೇಶದಲ್ಲಿ ಮಹಿಳಾ ನಾಯಕತ್ವ ದೇಶದಲ್ಲಿ ಉಜ್ವಲ ಭವಿಷ್ಯವಾಗಲಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!