ಬೆಂಗಳೂರಲ್ಲಿ ಐತಿಹಾಸಿಕ ಕರಗ ಮಹೋತ್ಸವ: ಈ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಲ್ಲಿ ಏಪ್ರಿಲ್.23, 2024ರಂದು ಐತಿಹಾಸಿಕ ಕರಗ ಮಹೋತ್ಸವ ನಡೆಯಲಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ.

ಈ ಕುರಿತಂತೆ ಆದೇಶ ಹೊರಡಿಸಿರುವ ಅವರು, ಏಪ್ರಿಲ್.23ರಂದು ಬೆಂಗಳೂರು ಕರಗ ಉತ್ಸವ ನಡೆಯಲಿದೆ.ಅಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ಕಟ್ಟೆಚ್ಚರ ವಹಿಸಲಾಗಿದೆ ಎಂದರು.

ಕರಗ ಮಹೋತ್ಸವದ ವೇಳೆಯಲ್ಲಿ ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗೋ ಸಾಧ್ಯತೆ ಇದೆ. ಹೀಗಾಗಿ ನಗರದ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ದೃಷ್ಠಿಯಿಂದ ಈ ಆದೇಶ ಮಾಡಿರೋದಾಗಿ ಹೇಳಿದ್ದಾರೆ.

ಅಂದಹಾಗೇ ವಿಲ್ಸನ್ ಗಾರ್ಡನ್, ಎಸ್ ಜೆ ಪಾರ್ಕ್, ಹಲಸೂರು ಗೇಟ್ ಪೊಲೀಸ್ ಠಾಣೆ ಹಾಗೂ ಎಸ್ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐತಿಹಾಸಿಕ ಕರಗ ಮಹೋತ್ಸವದಂದು ಮದ್ಯ ಮಾರಾಟ ನಿಷೇಧ ಮಾಡಿ ಆದೇಶಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!