January17, 2026
Saturday, January 17, 2026
spot_img

ಇತಿಹಾಸ ಸೃಷ್ಟಿಯಾದ ದಿನ: ಕಿರೀಟ ಗೆದ್ದ ವನಿತೆಯರಿಗೆ ಸಿಎಂ, ಡಿಸಿಎಂ ವಿಶ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚೊಚ್ಚಲ ಮಹಿಳಾ ವಿಶ್ವಕಪ್‌ ಕ್ರಿಕೆಟ್‌ ಚಾಂಪಿಯನ್‌ ಪಟ್ಟ ಅಲಂಕರಿಸಿದ ಭಾರತೀಯ ಮಹಿಳಾ ತಂಡಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಅಭಿನಂದನೆ ಸಲ್ಲಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಮಹಿಳಾ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಭಾರತೀಯ ಮಹಿಳಾ ಕ್ರಿಕೆಟ್ ತಂಡ ಅದ್ಭುತ ಆಟದ ಮೂಲಕ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ವಿಶ್ವವಿಜೇತ ಭಾರತೀಯ ಕ್ರಿಕೆಟ್ ಆಟಗಾರ್ತಿಯರಿಗೆ ಅಭಿನಂದನೆಗಳು. ಇಡೀ‌ ಪಂದ್ಯಾವಳಿಯುದ್ದಕ್ಕೂ ಅತ್ಯಂತ ಸಂಘಟಿತ ಪ್ರದರ್ಶನ ನೀಡುತ್ತಾ ಬಂದಿದ್ದ ಭಾರತೀಯ ಆಟಗಾರ್ತಿಯರು ನಿಜಕ್ಕೂ ಈ ಪ್ರಶಸ್ತಿಗೆ ಅರ್ಹರು. ಕ್ರಿಕೆಟ್ ಪ್ರೇಮಿಯಾದ ನನಗಿದು ಹೆಚ್ಚು ಖುಷಿ ಕೊಟ್ಟಿದೆ. ಇತಿಹಾಸ ಸೃಷ್ಟಿಯಾದ ಈ ದಿನ ಬಹುಕಾಲ ನೆನಪಿನಲ್ಲಿ ಉಳಿಯುವಂತಹುದ್ದು ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್‌ ಮಾಡಿದ್ದಾರೆ.

ʻವಿಶ್ವ ಚಾಂಪಿಯನ್ಸ್ ಭಾರತʼ… 2025ರ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದ ಟೀಂ ಇಂಡಿಯಾಕ್ಕೆ ಅಭಿನಂದನೆಗಳು. ನಿಮ್ಮ ಗೆಲುವು ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ ಮತ್ತು ಕನಸು ಕಾಣುವ ಪ್ರತಿಯೊಬ್ಬ ಯುವತಿಯಿಗೂ ಸ್ಫೂರ್ತಿ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ವಿಶ್‌ ಮಾಡಿದ್ದಾರೆ.

Must Read

error: Content is protected !!