Sunday, October 2, 2022

Latest Posts

ಹಿಟ್ ಎಂಡ್ ರನ್: ಮಗನ ದಾಖಲಾತಿಗೆ ಬಂದಿದ್ದ ತಂದೆ ಸ್ಥಳದಲ್ಲೇ ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್ ಪಡುಬಿದ್ರಿ :

ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ತಂದೆ ಸ್ಥಳದಲ್ಲೇ ಮೃತಪಟ್ಟು ಮಗ ತೀವ್ರ ಗಾಯಗೊಂಡು ಉಡುಪಿಯ ಖಾಸಗಿ ಆಸ್ಪತ್ರೆ ಗೆ ದಾಖಲಾದ ಘಟನೆ ಇಂದು ನಡೆದಿದೆ.

ಮೃತರನ್ನು ಬೆಳಗಾವಿ ಮೂಲದ ಪ್ರಭಾಕರ್ ಕೋತ ಎಂದು ಗುರುತಿಸಲಾಗಿದ್ದು,ಗಾಯಗೊಂಡವರು ಸಮರ್ಥ್ (14) ಎಂಬವರಾಗಿದ್ದಾರೆ. ಮೃತ ಪ್ರಭಾಕರ್ ಹಾಗು ಅವರ ಮಗ ಸಮರ್ಥ್ ಬೆಳಗಾವಿಯಿಂದ ಮಂಗಳವಾರ ರಾತ್ರಿ ಸರಕಾರಿ ಬಸ್ಸು ಮೂಲಕ ಹೊರಟು ಕಾಪು ಸಮೀಪದ ಕುತ್ಯಾರಿನ ಆನೆಗುಂದಿ ಸಂಸ್ಥಾನದ ವಿದ್ಯಾ ಸಂಸ್ಥೆಯಲ್ಲಿ ಮಗನನ್ನು ದಾಖಲಾತಿ ಮಾಡಲು ಆಗಮಿಸಿದ್ದರು.

ಉಚ್ಚಿಲದಲ್ಲಿ ಬಸ್ಸಿನಿಂದ ಇಳಿದು ರಸ್ತೆ ಪಕ್ಕದಲ್ಲಿ ನಿಂತಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಪ್ರಭಾಕರ್ ಮೃತಪಟ್ಟು, ಸಮರ್ಥ್ ಗಂಭೀರ ಗಾಯಗೊಂಡಿದ್ದಾರೆ. ವೃತ್ತ ನಿರೀಕ್ಷಕ, ಕೆ.ಸಿ ಪೂವಯ್ಯ, ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ ಹಾಗು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!