ಹಿಟ್ ಅಂಡ್ ರನ್ ಪ್ರಕರಣ: ಐವರು ಆರೋಪಿಗಳು 3 ದಿನ ಪೊಲೀಸ್ ಕಸ್ಟಡಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ನಿನ್ನೆ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಐವರು ಆರೋಪಿಗಳನ್ನು 3 ದಿನಗಳ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
ಭಾನುವಾರ ದೆಹಲಿಯಲ್ಲಿ ಮಾರುತಿ ಬಲೆನೊಕ್ಕೆ ಮಹಿಳೆ ಸ್ಕೂಟರ್ ಡಿಕ್ಕಿ ಹೊಡೆದು ಕಿಲೋಮೀಟರ್‌ಗಳವರೆಗೆ ಎಳೆದೊಯ್ದ ಆಘಾತಕಾರಿ ಘಟನೆ ನಡೆದಿತ್ತು.
ಘಟನೆಗೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗವು ನಗರ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.
ನಮ್ಮ ತನಿಖೆಯ ಪ್ರಕಾರ, ಇದು ಮಾರಣಾಂತಿಕ ಅಪಘಾತವಾಗಿದೆ. ಕಾರಿನಲ್ಲಿದ್ದ ಎಲ್ಲಾ 5 ಜನರನ್ನು ಬಂಧಿಸಲಾಗಿದೆ. ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಮೃತ ಬಾಲಕಿಯ ಮರಣೋತ್ತರ ಪರೀಕ್ಷೆಯನ್ನು ವೈದ್ಯರ ಮಂಡಳಿಯಿಂದ ನಡೆಸಲಾಗುವುದು, ಸೆಕ್ಷನ್ 304 ಆರೋಪಿಗೆ ಸುಲಭವಾಗಿ ಜಾಮೀನು ಸಿಗದಂತೆ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಹೊರ ಜಿಲ್ಲೆ ಡಿಸಿಪಿ ಹರೇಂದ್ರ ಕೆ ಸಿಂಗ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!