ಹಿಟ್ ಅಂಡ್ ರನ್ ಪ್ರಕರಣ: ದೆಹಲಿ ಪೊಲೀಸರಿಂದ ವರದಿ ಕೇಳಿದ ಗೃಹ ಸಚಿವ ಅಮಿತ್ ಶಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ಹಿಟ್ ಅಂಡ್ ರನ್ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ಪ್ರಕರಣದ ತನಿಖೆಯನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿ ಶಾಲಿನಿ ಸಿಂಗ್ ಅವರಿಗೆ ವಹಿಸಿದ್ದಾರೆ.
ಈ ಪ್ರಕರಣ ಬಗ್ಗೆ ಆದಷ್ಟು ಬೇಗ ಕೇಂದ್ರ ಗೃಹ ಸಚಿವಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಶಾ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ಮಹಿಳೆಯನ್ನು ಒಂದು ಗಂಟೆಗೂ ಹೆಚ್ಚು ಕಾಲ ಕಾರಿನಿಂದ ಎಳೆದುಕೊಂಡು ಹೋಗಿ ಆಕೆಯ ಸಾವಿಗೆ ಕಾರಣವಾದ ಆಘಾತಕಾರಿ ಘಟನೆ ಭಾನುವಾರ ನಡೆದಿತ್ತು.

ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದೆ. ಆದರೆ ಮಹಿಳೆಯ ಮನೆಯವರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದು, ಪೊಲೀಸರು ಅದನ್ನು ನಿರಾಕರಿಸಿದ್ದಾರೆ.
ಯುವತಿಯ ಮರಣೋತ್ತರ ಪರೀಕ್ಷೆ ಮತ್ತು ಕಾರಿನಲ್ಲಿದ್ದವರು ಆಲ್ಕೋಹಾಲ್ ಪರೀಕ್ಷೆಯ ವರದಿಗಳನ್ನು ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!